ಉಕ್ಕಿ ಹರಿಯುತ್ತಿರುವ ಕಾವೇರಿ, ಮೆಟ್ಟೂರು ಜಲಾಶಯ ಭರ್ತಿ

7

ಉಕ್ಕಿ ಹರಿಯುತ್ತಿರುವ ಕಾವೇರಿ, ಮೆಟ್ಟೂರು ಜಲಾಶಯ ಭರ್ತಿ

Published:
Updated:
Deccan Herald

ಮಲೆ ಮಹದೇಶ್ವರ ಬೆಟ್ಟ: ಕೇರಳದ ವಯನಾಡು ಮತ್ತು ಕೊಡಗಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ 1.20 ಲಕ್ಷಕ್ಕೂ ಹೆಚ್ಚು ಕ್ಯುಸೆಕ್‌ ನೀರು ಬಿಡುತ್ತಿರುವುದರಿಂದ ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯಾಗಿದೆ.

ಜಲಾಶಯದ 16 ಗೇಟ್‌ಗಳ ಮೂಲಕ ಅಷ್ಟೇ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ತಗ್ಗುಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಕಟ್ಟೆಚ್ಚರ ವಹಿಸುವಂತೆ ತಮಿಳುನಾಡು ಸರ್ಕಾರ ಸೂಚಿಸಿದೆ.

ಮೆಟ್ಟೂರು ಜಲಾಶಯದ ಗರಿಷ್ಠ ಮಟ್ಟ 120 ಅಡಿಗಳಾಗಿದ್ದು, ಜುಲೈ ತಿಂಗಳ ಕೊನೆಯ ವಾರದಲ್ಲೂ ಒಮ್ಮೆ ಭರ್ತಿಯಾಗಿತ್ತು. ಈ ಮತ್ತೆ ತುಂಬಿರುವುದರಿಂದ ಜಲಾಶಯದ ಹಿನ್ನೀರು ಪಾಲಾರ್‌ ಬಳಿಯ ಸೋರೆಕಾಯಿ ಮಡುವಿನವರೆಗೂ ವ್ಯಾಪಿಸಿದೆ. 

ಜಲಾಶಯದ ಹೊರಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಿದರೆ ತಮಿಳುನಾಡಿನ 12 ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಲಿದೆ. ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳಿಗೆ ಸಿದ್ಧತೆ ನಡೆಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಪ್ರವಾಸಿಗರಿಗೆ ನಿರ್ಬಂಧ: ನೆರೆಗೆ ತುತ್ತಾಗುವ ಸಾಧ್ಯತೆ ಇರುವ ಜಲಾಶಯದ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. 

 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !