ಬುಧವಾರ, ಸೆಪ್ಟೆಂಬರ್ 22, 2021
27 °C

ಹಾಸ್ಟೆಲ್ ಊಟದಲ್ಲಿ ಸತ್ತ ಇಲಿ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್‌ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಊಟದಲ್ಲಿ ಸತ್ತ ಇಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

‘ಕ್ಯಾಂಟೀನ್ ಪ್ರದೇಶ ಕಸ ವಿಲೇವಾರಿಯ ಸ್ಥಳವಾಗಿದೆ. ಅಡುಗೆಯವರು ಇದೇ ಸ್ಥಳದಲ್ಲಿ ಬಟ್ಟೆಯನ್ನು ಕೂಡತೊಳೆದುಕೊಳ್ಳುತ್ತಾರೆ. ಅನೇಕ ಬಾರಿ ಜಿರಳೆ, ಇರುವೆಗಳು ಆಹಾರದಲ್ಲಿ ಕಾಣಿಸಿಕೊಂಡಿದ್ದವು. ಈ ವಿಚಾರವಾಗಿ ಆಡಳಿತ ಮಂಡಳಿಗೆ ಕೂಡ ಹಲವು ಬಾರಿ ದೂರು ನೀಡಲಾಗಿತ್ತು’ ಎಂದು ವಿದ್ಯಾರ್ಥಿಗಳು ದೂರಿದರು. ಪ್ರತಿಕ್ರಿಯೆಗೆ ಆಡಳಿತ ಮಂಡಳಿಯವರು ಲಭ್ಯರಾಗಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು