ಭಾನುವಾರ, ನವೆಂಬರ್ 17, 2019
21 °C

ಚಳ್ಳಕೆರೆಯಲ್ಲಿ ಬಿಸಿಯೂಟ ಸೇವಿಸಿ 50 ಮಕ್ಕಳು ಅಸ್ವಸ್ಥ

Published:
Updated:

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ಚನ್ನಬಸಯ್ಯನಹಟ್ಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ.

ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಊಟ ಸೇವಿಸಿದ ತಕ್ಷಣ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ನಾಯಕನಹಟ್ಟಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.

30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎಲ್ಲ ಮಕ್ಕಳಿಗೆ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಕೆಲ ಮಕ್ಕಳನ್ನು ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ಕ್ಷೇತ್ರದಲ್ಲೇ ಮಕ್ಕಳು ಚಿಕಿತ್ಸೆಗೆ ಪರದಡಿದ್ದಾರೆ.

ಪ್ರತಿಕ್ರಿಯಿಸಿ (+)