ಬುಧವಾರ, ಏಪ್ರಿಲ್ 1, 2020
19 °C

ಅತೃಪ್ತ ಶಾಸಕರ ಸಭೆ: ಕೇವಲ ಊಹಾಪೋಹ ಎಂದ ಸಚಿವ ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಪಕ್ಷದ ಕೆಲವು ಶಾಸಕರು ಇಲಾಖೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಮನೆಗೆ ಬಂದಿದ್ದರು. ಮಾಧ್ಯಮಗಳಲ್ಲಿ ಊಹಾಪೋಹದ ಸುದ್ದಿಗಳು ಪ್ರಸಾರವಾಗಿದೆ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವನಾಗಿದ್ದೇನೆ. ನನ್ನ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಶಾಸಕರು ಬಂದಿದ್ದಾರೆ. ಈ ಹಿಂದೆಯೂ ಹಲವು ಬಾರಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಭೆ ಮಾಡಿದ್ದೇನೆ. ಇದೀಗ ಈ ರೀತಿ ಗೊಂದಲ ಸೃಷ್ಟಿಸುವ ಕೆಲಸವಾಗುತ್ತಿದೆ ಎಂದು ದೂರಿದರು. 

ಅತೃಪ್ತ ಶಾಸಕರ ಸಭೆ

ಸಚಿವ ಸ್ಥಾನ ಸಿಗದ ಕೆಲವು ಅತೃಪ್ತ ಶಾಸಕರು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ನಿವಾಸದಲ್ಲಿ ಸೋಮವಾರ ರಾತ್ರಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪ್ರಸಕ್ತ ಪಕ್ಷದ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಗಿದ್ದು, ಸಚಿವ ಸ್ಥಾನ ನೀಡುವಾಗ ಪ್ರದೇಶ, ಜಾತಿ ಮತ್ತು ಹಿರಿತನಕ್ಕೆ ಮನ್ನಣೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿದ್ದವು. 

ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಅವರ ಬಗ್ಗೆ ಸಭೆಯಲ್ಲಿ ಅಪಸ್ವರ ಕೇಳಿ ಬಂದಿದೆ. ಆಡಳಿತದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದು ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿತ್ತು. ಸಭೆಯಲ್ಲಿ ಶಾಸಕರಾದ ಉಮೇಶ ಕತ್ತಿ, ಬಸನಗೌಡ ಪಾಟೀಲ ಯತ್ನಾಳ, ಮುರುಗೇಶ ನಿರಾಣಿ, ಶಿವನಗೌಡ ನಾಯಕ್, ರಾಜೂಗೌಡ, ಶಂಕರ ಮುನೇನಕೊಪ್ಪ, ಎ.ಎಸ್.ಪಾಟೀಲ ನಡಹಳ್ಳಿ, ರುದ್ರಪ್ಪ ಲಮಾಣಿ ಮತ್ತು ಇತರರು ಇದ್ದರು ಎನ್ನಲಾಗಿದೆ. ಕ್ರೆಸೆಂಟ್ ರಸ್ತೆಯಲ್ಲಿರುವ ಮನೆಯಲ್ಲಿ ಭೋಜನ ಕೂಟದ ನೆಪದಲ್ಲಿ ಸಭೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು