ಗುಬ್ಬಿ: ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಕೊಬ್ಬರಿ ದರ ಕುಸಿದಿದ್ದು, ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ವಿಂಟಲ್‌ಗೆ ₹1,300 ಬೆಂಬಲ ಬೆಲೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಶನಿವಾರ ತಿಳಿಸಿದರು.
ತಾಲ್ಲೂಕಿನ ಕಡಬ ಹೋಬಳಿಯ ಮಾರಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉತ್ತರ ಭಾರತ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಕೊಬ್ಬರಿಗೆ ಬೇಡಿಕೆ ಇಲ್ಲದಿರುವುದರಿಂದ ಕ್ವಿಂಟಲ್‌ಗೆ ₹16,000ರಿಂದ ₹18,000 ಇದ್ದ ದರ ಈಗ ₹ 9,000ಕ್ಕೆ ಕುಸಿದಿದೆ. ಕ್ವಿoಟಲ್‌ಗೆ ₹1,300 ಬೆಂಬಲ ಬೆಲೆ ಸೇರಿ ₹10,300ಕ್ಕೆ ನಾಫೆಡ್ ಮೂಲಕ ಖರೀದಿಸಲಾಗುವುದು ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.