ಶುಕ್ರವಾರ, ನವೆಂಬರ್ 22, 2019
23 °C

ಡಿಕೆಶಿ ಹೀರೊ ಮಾಡುವ ಅಗತ್ಯ ಬಿಜೆಪಿಗೆ ಇಲ್ಲ: ಮಾಧುಸ್ವಾಮಿ

Published:
Updated:

ಬೆಳಗಾವಿ: ‘ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರನ್ನು ‌ಬಂಧಿಸಿ ಹೀರೊ ಮಾಡುವ ಅಗತ್ಯ ಬಿಜೆಪಿಗೆ ಇಲ್ಲ. ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಅವರ ಕೆಲಸ ನಿರ್ವಹಿಸಿದ್ದಾರೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ‌ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಾವು ಕೆಟ್ಟ ರಾಜಕಾರಣ ಮಾಡಿಕೊಂಡು ‌ಬಂದಿಲ್ಲ. ಶಿವಕುಮಾರ್ ಬಂಧಿಸಬೇಕಾದ ಅಗತ್ಯ, ಹಠ ನಮಗಿಲ್ಲ. ಆ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.

‘ನಾವೇ ಕಾನೂನು ಮಾಡಿದ್ದೇವೆ; ಅಧಿಕಾರಿಗಳನ್ನು ಹಾಕಿದ್ದೇವೆ. ಅವರೇ ನನ್ನನ್ನು ಬಂಧಿಸಿದ್ದಾರೆ ಎಂದು ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ, ಬಿಜೆಪಿ ಹೊಣೆ ಮಾಡುವುದು ತಪ್ಪು ಕಲ್ಪನೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)