ಶನಿವಾರ, ಡಿಸೆಂಬರ್ 14, 2019
23 °C
ಗೆದ್ದ 24 ಗಂಟೆಯೊಳಗೆ ಸಚಿವ ಸ್ಥಾನ: ರಾಮುಲು ಭರವಸೆ

ಭವಿಷ್ಯದ ಸಿ.ಎಂ. ನಾನು: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಣಸೂರು: ‘ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದ 24 ಗಂಟೆಯೊಳಗೇ ಸಚಿವ ಸ್ಥಾನ ನೀಡುವುದು ಖಚಿತ’ ಎಂದು ಸಚಿವ ಬಿ. ಶ್ರೀರಾಮುಲು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘15 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದರೆ ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ದೂಳೀಪಟವಾಗಿ ಬಿಜೆಪಿ ಮೇಲುಗೈ ಸಾಧಿಸುವುದು ನಿಶ್ಚಿತ’ ಎಂದರು.

ಭವಿ‌ಷ್ಯದ ಮುಖ್ಯಮಂತ್ರಿ: ‘ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿಯಾಗುವೆ. ನನಗೆ ವಯಸ್ಸಿದೆ. ಸದ್ಯಕ್ಕೆ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಅನುಭವ ಪಡೆಯುವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸುಮಲತಾ ಬೆಂಬಲ ಬಿಜೆಪಿಗೇ: ಶ್ರೀರಾಮುಲು

ಮಂಡ್ಯ: ‘ಸಂಸದೆ ಸುಮಲತಾ ಅವರು ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲಿದ್ದಾರೆ. ಈ ಕುರಿತು ಈಗಾಗಲೇ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಮಾತುಕತೆ ನಡೆಸಿದ್ದಾರೆ’ ಎಂದು ಸಚಿವ ಶ್ರೀರಾಮುಲು ಹೇಳಿದರು.

‘ಸುಮಲತಾ ಈ ಭಾಗದ ಬಲು ದೊಡ್ಡ ನಾಯಕಿ. ಯಾರಿಗೆ ಬೆಂಬಲ ನೀಡಬೇಕು ಎಂಬುದು ಅವರಿಗೆ ತಿಳಿದಿದೆ. ರಾಜ್ಯಮಟ್ಟದ ಮುಖಂಡರೂ ಈ ಕುರಿತು ಅವರೊಂದಿಗೆ ಮಾತನಾಡಿದ್ದಾರೆ. ಕೆ.ಆರ್‌.ಪೇಟೆ ಕ್ಷೇತ್ರದ ನಮ್ಮ ಅಭ್ಯರ್ಥಿ ಜನಪ್ರಿಯರಾಗಿದ್ದು, ಗೆಲ್ಲುವ ವಿಶ್ವಾಸವಿದೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು