ಸೋಮವಾರ, ಡಿಸೆಂಬರ್ 16, 2019
17 °C
ಹುಬ್ಬಳ್ಳಿ ಸ್ಪೋಟ

ಬಾಂಗ್ಲಾ ವಲಸಿಗರಿಂದ ಬಾಂಬ್ ಸ್ಫೋಟ ಶಂಕೆ: ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ‘ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಬಾಂಬ್‌ ಸ್ಫೋಟದ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ತನಖೆ ನಡೆಸುತ್ತಿದ್ದೇವೆ. ಈ ಹಿಂದೆ ಗೃಹ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ ಅವರಿಗೆ ಬಾಂಗ್ಲಾ ವಲಸಿಗರ ಬಗ್ಗೆ ಹೇಳಿದ್ದೆವು. ವಿಧಾನಸಭೆಯಲ್ಲೂ ಮಾತನಾಡಿದ್ದೇನೆ. ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರ ಪರಿಣಾವನ್ನು ಈಗ ಎದುರಿಸುತ್ತಿದ್ದೇವೆ. ಅವರ ಕೃತ್ಯವೇ ಇರಬಹುದು’ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ, ಮಗುವಿಗೆ ಗಾಯ: ಬಾಂಬ್‌ ಶಂಕೆ

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ಪೋಟದ ಹಿಂದೆ ಯಾರಿದ್ದಾರೆ? ಯಾವ ಕಾರಣಕ್ಕೆ ಆಗಿದೆ ಎನ್ನುವುದು ಪೊಲೀಸ್ ತನಿಖೆಯ ಬಳಿಕ ಹೊರ ಬರಲಿದೆ. ತನಿಖೆಗೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ. ಸತ್ಯಾಂಶವನ್ನು ಶೀಘ್ರ ಜನರ ಮುಂದೆ ಇಡಲಿದ್ದೇವೆ. ಈ ದುರಂತದಲ್ಲಿ ಒಬ್ಬರಿಗೆ ಗಾಯವಾಗಿದ್ದು, ಅಲ್ಲಿಗೆ ಭೇಟಿ ನೀಡಿಯೇ ಇಲ್ಲಿಗೆ ಬರಲು ವಿಳಂಬವಾಯಿತು’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು