ಬೆಂಗಳೂರು: ‘ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಪುನರುಚ್ಚರಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷರಾದ
ಎಚ್.ಕೆ. ಪಾಟೀಲ ಕೇಳಿರುವ ದಾಖಲೆಗಳನ್ನು ನಾನೇ ಕಳುಹಿಸಲು ಸಿದ್ಧ. ಆದರೆ, ದಾಖಲೆಗಳ ಪರಿಶೀಲನೆಗೆ ತಡೆಯಾಜ್ಞೆ ನೀಡಿರುವ ಸಭಾಧ್ಯಕ್ಷರ ಪರಮಾಧಿಕಾರವನ್ನು ನಾನು ಪ್ರಶ್ನಿಸುವುದಿಲ್ಲ’ ಎಂದರು.

ಯಾವುದೇ ಗೊಂದಲ ಇಲ್ಲ: ‘ನಮ್ಮ ಪಕ್ಷದಲ್ಲಿ ಯಾವುದೇ ಗುಂಪು ರಾಜಕೀಯ ಇಲ್ಲ, ಭಿನ್ನಾಭಿಪ್ರಾಯಗಳೂ ಇಲ್ಲ. ಬೇರೆ ಪಕ್ಷಗಳಲ್ಲಿರುವಂತೆ ನಮ್ಮ ಪಕ್ಷದಲ್ಲೂ ಸಣ್ಣಪುಟ್ಟ ವ್ಯತ್ಯಾಸಗಳಿವೆ ಅಷ್ಟೆ. ಉಮೇಶ ಕತ್ತಿ, ಬಸನಗೌಡಪಾಟೀಲ ಯತ್ನಾಳ, ಮುರುಗೇಶ ನಿರಾಣಿ ಎಲ್ಲರೂ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಹೇಳಿಕೆಗಳ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದರು.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮರ್ಥ ನಾಯಕ’ ಎಂದು ಬಣ್ಣಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.