ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ವರ್ಷ ಸರ್ಕಾರ ಸುಭದ್ರ: ಸಚಿವ ತುಕರಾಂ ವಿಶ್ವಾಸ

Last Updated 28 ಡಿಸೆಂಬರ್ 2018, 12:27 IST
ಅಕ್ಷರ ಗಾತ್ರ

ಚಿತ್ರದುರ್ಗ: ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದ ಮಾದರಿಯಲ್ಲಿಯೇ ಜನಪರ ಕೆಲಸ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ ತಿಳಿಸಿದರು.

ಖಾತೆ ಹಂಚಿಕೆಯಾದ ಖುಷಿಯಲ್ಲಿ ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

‘ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಣ್ಣ–ಪುಟ್ಟ ಅಸಮಾಧಾನ ಉಂಟಾಗುವುದು ಸಹಜ. ನಾಲ್ಕು ಗೋಡೆಗಳ ನಡುವೆ ಕುಳಿತು ಸಮಸ್ಯೆ ಬಗೆಹರಿಸಿಕೊಂಡಿದ್ದೇವೆ. ರಮೇಶ್‌ ಜಾರಕಿಹೊಳಿ ಅವರು ರಾಜೀನಾಮೆ ಕೊಡುವುದಿಲ್ಲ. ಅವರು ಕಾಂಗ್ರೆಸ್‌ ಬಿಟ್ಟು ಹೋಗುವುದೂ ಇಲ್ಲ. ಹೈಕಮಾಂಡ್‌ ಭೇಟಿ ಮಾಡಲು ದೆಹಲಿಗೆ ಹೋಗಿಬರಬಹುದು ಅಷ್ಟೇ’ ಎಂದರು.

‘ಲೋಕಸಭಾ ಚುನಾವಣೆಗೂ ಮುನ್ನ ಹೊರತಂದಿದ್ದ ಪ್ರಣಾಳಿಕೆಯ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ. ಜನರ ಭಾವನೆಗಳನ್ನು ಕೆಣಕುವ ಉದ್ದೇಶದಿಂದ ರಾಮಮಂದಿರವನ್ನು ಮುನ್ನೆಲೆಗೆ ತರಲಾಗಿದೆ. ಸರ್ದಾರ್‌ ವಲ್ಲಭಬಾಯ್‌ ಪ್ರತಿಮೆ ನಿರ್ಮಿಸಿ ಜಾತಿ ಜಾತಿಗಳ ನಡುವೆ ವೈಷಮ್ಯ ಬಿತ್ತಲಾಗುತ್ತಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT