ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ: ಜ.24ರಂದು ‘ಹೊಸಪೇಟೆ ಬಂದ್‌’?

7
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪೋಸ್ಟರ್

ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ: ಜ.24ರಂದು ‘ಹೊಸಪೇಟೆ ಬಂದ್‌’?

Published:
Updated:

ಹೊಸಪೇಟೆ: ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿರುವ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ವಿರುದ್ಧ ಪ್ರತಿಭಟನೆಗೆ ಒಂದು ಕಡೆ ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಗಣೇಶ್‌ ಪರವಾಗಿ ಹೋರಾಟ ನಡೆಸಲು ಅವರ ಬೆಂಬಲಿಗರು ಅಣಿಯಾಗುತ್ತಿದ್ದಾರೆ.

ಶಾಸಕ ಜೆ.ಎನ್‌. ಗಣೇಶ್‌ ಅವರನ್ನು ಪಕ್ಷದಿಂದ ಅಮಾನತು ಮಾಡಿರುವ ನಿರ್ಧಾರವನ್ನು ಕಾಂಗ್ರೆಸ್‌ ವರಿಷ್ಠರು ಹಿಂಪಡೆಯಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಜ. 23ರಂದು ಪ್ರತಿಭಟನೆ ನಡೆಸಲು ಯೋಜಿಸಿದ್ದಾರೆ. 

ಇನ್ನೊಂದು ಕಡೆ ಹಲ್ಲೆ ಖಂಡಿಸಿ ಆನಂದ್‌ ಸಿಂಗ್‌ ಅವರ ಬೆಂಬಲಿಗರು ಜ.24ರಂದು ‘ಹೊಸಪೇಟೆ ಬಂದ್‌’ ನಡೆಸಲು ಮುಂದಾಗಿದ್ದಾರೆ. ಈ ಕುರಿತ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. 

ಜ. 20ರಂದು ಗಣೇಶ್‌ ಅವರು ಹಲ್ಲೆ ನಡೆಸಿದ್ದರಿಂದ ಆನಂದ್‌ ಸಿಂಗ್‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಣೇಶ್‌ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಘಟನೆ ನಡೆದ ನಂತರದಿಂದ ಇದುವರೆಗೆ ಅವರು ಕ್ಷೇತ್ರದಲ್ಲಿ ಕಾಣಿಸಿಕೊಂಡಿಲ್ಲ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !