ಬುಧವಾರ, ಅಕ್ಟೋಬರ್ 23, 2019
27 °C
ಬಿಜೆಪಿ

ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ನೋಟಿಸ್‌

Published:
Updated:

ಬೆಂಗಳೂರು: ರಾಜ್ಯಕ್ಕೆ ನೆರೆ ಪರಿಹಾರ ತರುವಲ್ಲಿ ಪಕ್ಷದ ಸಂಸದರು ಮತ್ತು ಕೇಂದ್ರ ಸಚಿವರು ವಿಫಲರಾಗಿದ್ದಾರೆ ಎಂದು ಟೀಕಿಸಿ, ಪಕ್ಷದ ವರಿಷ್ಠರ ವಿರುದ್ಧವೂ ಹರಿಹಾಯ್ದಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶುಕ್ರವಾರ ಶೋಕಾಸ್‌ ನೋಟಿಸ್‌ ನೀಡಿದೆ. ಹತ್ತು ದಿನಗಳ ಒಳಗೆ ಉತ್ತರ ನೀಡದೇ ಇದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ತಿಳಿಸಿದೆ.

ಪ್ರತಿಕ್ರಿಯೆ: ‘ನನಗೆ ಸುಳ್ಳು ಹೇಳುವ ಚಟವಿಲ್ಲ. ಜನರ ಹಿತದೃಷ್ಟಿಯಿಂದ ಮಾತನಾಡಿದ್ದಕ್ಕೆ ಏನು ಶಿಕ್ಷೆ ಕೊಟ್ಟರೂ ಸ್ವೀಕರಿಸುತ್ತೇನೆ. ಪಕ್ಷದಿಂದ ಉಚ್ಚಾಟನೆ ಮಾಡಿದರೆ ಮಾಡಲಿ. ಹೈಕಮಾಂಡ್‌ಗೆ ತಪ್ಪು ಮಾಹಿತಿ ನೀಡಲಾಗಿದೆ. ಪರಿಹಾರ ಕೇಳುವುದು ಪಕ್ಷ ವಿರೋಧಿ ಚಟುವಟಿಕೆ ಹೇಗಾಗುತ್ತದೆ’ ಎಂದು ಶಾಸಕ ಯತ್ನಾಳ ಪ್ರತಿಕ್ರಿಯಿಸಿದ್ದಾರೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)