ಸೋಮವಾರ, ಡಿಸೆಂಬರ್ 9, 2019
17 °C

ಕಾರು ಡಿಕ್ಕಿ: ಇಬ್ಬರು ಯುವಕರ ಸಾವು, ಶಾಸಕ ಸಿ.ಟಿ.ರವಿ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶಾಸಕ ಸಿ.ಟಿ.ರವಿ ‍ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಹಿನ್ನೆಲೆ, ಸಿ.ಟಿ.ರವಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಯುವ ಸಮುದಾಯ ಹಾಗೂ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಪಘಾತಕ್ಕಿಡಾದ ಸಂದರ್ಭದಲ್ಲಿ ಸ್ಪಂದಿಸಬೇಕಿತ್ತು. ಮಾನವೀಯವಾಗಿ ರವಿ ವರ್ತಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಮೃತರ ಸ್ನೇಹಿತರು ರವಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದು ಕುಣಿಗಲ್ ಠಾಣೆ ಎದುರು ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ: ಶಾಸಕ ಸಿ.ಟಿ.ರವಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಇಬ್ಬರು ಯುವಕರ ಸಾವು

ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಶಾಸಕ ಸಿ.ಟಿ.ರವಿ, ಚೆನ್ನೈಗೆ ಹೊರಟಿರುವುದಾಗಿ ಮಾಹಿತಿ ಇದೆ. ಅವರ ವಿರುದ್ಧ ಕುಣಿಗಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಕಾರು ಡಿಕ್ಕಿ ಪ್ರಕರಣ: ದೂರಿನಲ್ಲಿ ಶಾಸಕ ಸಿ.ಟಿ.ರವಿ ಹೆಸರಿಲ್ಲ!

ಮಂಗಳವಾರ ಬೆಳಗಿನ ಜಾವ ಸಿ.ಟಿ.ರವಿ ಪ್ರಯಾಣಿಸುತ್ತಿದ್ದ ಫಾರ್ಚುನರ್‌ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿ, ಯುವಕರಿಬ್ಬರು ಸಾವಿಗೀಡಾದರು. ತುಮಕೂರು ಜಿಲ್ಲೆ ಕುಣಿಗಲ್‌ ತಾಲ್ಲೂಕಿನ ಊರ್ಕೇನಹಳ್ಳಿ ಸಮೀಪ ಹೆದ್ದಾರಿಯ ಪಕ್ಕದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕನಕಪುರ ತಾಲ್ಲೂಕಿನ ಸೂರನಹಳ್ಳಿ ಗ್ರಾಮದ ಸುನೀಲ್ ಕುಮಾರ್‌(27) ಮತ್ತು ಶಶಿಕುಮಾರ್‌(28) ಸಾವಿಗೀಡಾಗಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು