ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಗಣೇಶ್ ವಿರುದ್ಧ ಸೂಕ್ತ ಕ್ರಮ: ಎಂ.ಬಿ.ಪಾಟೀಲ

Last Updated 23 ಜನವರಿ 2019, 8:28 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಂಪ್ಲಿ ಶಾಸಕ ಗಣೇಶ್ ಅವರ ಮೇಲೆ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಅವರ ಕೆಲಸ ಮಾಡುತ್ತಿದ್ದಾರೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.

‘ಬಂಧನ ಆಗಿಲ್ಲ ಅಂದರೆ ಪೊಲೀಸರು ಸುಮ್ಮನೆ ಕೂತ್ತಿದ್ದಾರೆ ಎಂದಲ್ಲ. ಪ್ರಕರಣಕ್ಕೆ ಸಂಬಂಧಿಸಿ ಯಾರ ಹಸ್ತಕ್ಷೇಪವೂ ಇಲ್ಲ. ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಗೈರು ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಪ್ರಧಾನಿ ಗೈರು ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಏನಾದರೂ ಹೇಳಿದರೆ ಅದು ವಿವಾದ ಆಗಬಹುದು. ಶ್ರೀಗಳಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಬೇಕು. ಕೇಂದ್ರದ ನಾಯಕರಿಗೂ ಶ್ರೀಗಳ ಸೇವೆ ಬಗ್ಗೆ ಅರಿವಿದೆ’ ಎಂದರು.

ಕೀಳು ಘಟನೆ: ‘ನನ್ನ 30 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕೀಳು ಘಟನೆ ನೋಡಿರಲಿಲ್ಲ ಎಂದು ಶಾಸಕರ ಮಾರಾಮಾರಿ ಬಗ್ಗೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಬೇಸರ ವ್ಯಕ್ತಪಡಿಸಿದರು.

ಘಟನೆ ಬಗ್ಗೆ ಶಾಸಕ ಗಣೇಶ್‌ ವಿರುದ್ಧ ದೂರು ದಾಖಲಾಗಿದೆ. ಪೊಲೀಸರು ಸೂಕ್ತ ಕ್ರಮ‌ ಕೈಗೊಳ್ಳುತ್ತಾರೆ. ಜತೆಗೆ ಘಟನೆ ಬಗ್ಗೆ ತನಿಖೆ ಮಾಡಲು ಸಮಿತಿ ರಚಿಸಲಾಗಿದೆ. ನನ್ನ ನೇತೃತ್ವದಲ್ಲಿ ತನಿಖೆ ಆಗಲಿದೆ ಎಂದು ಹೇಳಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT