ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಜೆ.ಎನ್‌.ಗಣೇಶ್ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Last Updated 10 ಏಪ್ರಿಲ್ 2019, 15:46 IST
ಅಕ್ಷರ ಗಾತ್ರ

ಬೆಂಗಳೂರು: ಹೊಸಪೇಟೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಈ ಕುರಿತ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಮುಕ್ತಾಯಗೊಳಿಸಿತು.

ಈ ಮುನ್ನ ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದಲ್ಲಿ ಗಣೇಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಕಾಂಗ್ರೆಸ್‌ ಪಕ್ಷದ ಶಾಸಕರುಗಳಾದ ಗಣೇಶ್‌ ಮತ್ತು ಆನಂದ ಸಿಂಗ್‌ ಇತ್ತೀಚೆಗೆ ಈಗಲ್‌ಟನ್ ರೆಸಾರ್ಟ್‌ನಲ್ಲಿ ಪರಸ್ಪರ ಕಾದಾಡಿಕೊಂಡಿದ್ದರು. ಈ ಸಂದರ್ಭದಲ್ಲಿ, ‘ಗಣೇಶ್ ಅವರು, ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದರು’ ಎಂಬ ಆರೋಪ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT