ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ಸಿಗರು ದಾಖಲಿಸುವ ಕೇಸುಗಳು ನನಗೆ ಆಶೀರ್ವಾದವಿದ್ದಂತೆ: ರೇಣುಕಾಚಾರ್ಯ

Last Updated 13 ಏಪ್ರಿಲ್ 2020, 11:37 IST
ಅಕ್ಷರ ಗಾತ್ರ

ದಾವಣಗೆರೆ: 'ಪ್ರಕರಣ ದಾಖಲಿಸುವ ಮೂಲಕ ನನ್ನ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸಲು ಕಾಂಗ್ರೆಸ್‌ ಮುಖಂಡರಿಂದ ಸಾಧ್ಯವಿಲ್ಲ. ಇದು ನನಗೆ ಇನ್ನಷ್ಟು ಕೆಲಸ ಮಾಡಲು ಆಶೀರ್ವಾದ ಹಾಗೂ ಪ್ರೇರಣೆಯಾಗಲಿದೆ' ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ತಿರುಗೇಟು ನೀಡಿದರು.

'ಚಿಕಿತ್ಸೆಗೆ ಸ್ಪಂದಿಸದ ತಬ್ಲೀಗ್‌ಗಳನ್ನು ಗುಂಡಿಕ್ಕಿ ಕೊಂದರೂ ತಪ್ಪಲ್ಲ' ಎಂದು ತಾವು ನೀಡಿದ ಹೇಳಿಕೆ ವಿರುದ್ಧ ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷಚಂದ್ರ ಅವರು ಪ್ರಕರಣ ದಾಖಲಿಸಿರುವುದಕ್ಕೆ ರೇಣುಕಾಚಾರ್ಯ ಸೋಮವಾರ ಸುದ್ದಿಗಾರರಿಗೆ ಈ ರೀತಿ ಪ್ರತಿಕ್ರಿಯಿಸಿದರು.

'ನಾನು ಹೋರಾಟದ ಮೂಲಕವೇ ಶಾಸಕನಾಗಿದ್ದೇನೆ. ಕಾಂಗ್ರೆಸ್ ಸರ್ಕಾರ ಇದ್ದಾಗ 2003ರಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದಾಗ ನನ್ನನ್ನು ಬಂಧಿಸಿ 15 ದಿನಗಳ ಕಾಲ ಬೆಳಗಾವಿ ಜೈಲಿನಲ್ಲಿಟ್ಟಿದ್ದರು. ಹಿಂದೆ ಚುನಾವಣೆಗೆ 15 ದಿನಗಳಿರುವಾಗ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ವಿ.ಎಚ್‌.ಪಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಚಾರಕ್ಕೆ ನನ್ನನ್ನು ಬಳ್ಳಾರಿ ಜೈಲಿಗೆ ಕಳುಹಿಸಿದ್ದರು. ಕಾಂಗ್ರೆಸ್‌ ನಾಯಕರಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಜೈಲಿಗೆ ಕಳುಹಿಸುವುದಾದರೆ ಕಳುಹಿಸಲಿ' ಎಂದು ರೇಣುಕಾಚಾರ್ಯ ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT