ಮನೆಗೆ ಮರಳಿದ ಶಾಸಕ ಹ್ಯಾರಿಸ್

ಬೆಂಗಳೂರು: ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಗುರುವಾರ ಮನೆಗೆ ಮರಳಿದರು.
ಎಂಜಿಆರ್ ಜನ್ಮದಿನದ ಪ್ರಯುಕ್ತ ವನ್ನಾರ್ ಪೇಟೆಯ ಬಜಾರ್ ಸ್ಟ್ರೀಟ್ನಲ್ಲಿ ಬುಧವಾರ ರಾತ್ರಿ ಸಂಗೀತ ರಸಮಂಜರಿ ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದ ಅತಿಥಿಯಾಗಿ ಹ್ಯಾರಿಸ್ ಭಾಗವಹಿಸಿದ್ದರು. ಅವರು ಕುಳಿತಿದ್ದ ಜಾಗಕ್ಕೆ ಯಾವುದೋ ಸ್ಫೋಟಕ ಬಂದು ಬಿದ್ದಿತ್ತು. ಅವರ ಕಾಲಿಗೆ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ‘ಅನುಮಾನಸ್ಪದ ವಸ್ತು ಸ್ಫೋಟಗೊಂಡಿದೆ. ಅದು ಏನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಜನ್ಮದಿನ ಆಚರಣೆ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲವೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.