ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ರೋಷನ್ ಬೇಗ್ ವಶಕ್ಕೆ: ಶಿವಾಜಿನಗರ ಸುತ್ತಮುತ್ತ ಬಿಗಿ ಭದ್ರತೆ

Last Updated 16 ಜುಲೈ 2019, 4:11 IST
ಅಕ್ಷರ ಗಾತ್ರ

ಬೆಂಗಳೂರು: ಹೂಡಿಕೆದಾರರಿಗೆ ಕೋಟ್ಯಂತರ ಹಣ ವಂಚಿಸಿದ ಐಎಂಎ ಸಮೂಹ ಕಂಪನಿಗಳ ಅಕ್ರಮಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಶಾಸಕ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಹಿನ್ನಲೆಯಲ್ಲಿ ಶಿವಾಜಿನಗರ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಮುಂಬೈಗೆ ಹೊರಟಿದ್ದ ಬೇಗ್ ಅವರನ್ನು ಸೋಮವಾರ ತಡರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆ ಬೆನ್ನಲ್ಲೇ ಶಿವಾಜಿನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು

ಫ್ರೇಜರ್ ಟೌನ್ ನಲ್ಲಿರುವ ರೋಷನ್ ಬೇಗ್ ಅವರ ನಿವಾಸದ ಬಳಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಬೇಗ್ ಬೆಂಬಲಿಗರು ಮತ್ತು ಅಭಿಮಾನಿಗಳು ಗಲಾಟೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT