ಮಂಗಳವಾರ, ಆಗಸ್ಟ್ 11, 2020
26 °C

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಪತ್ನಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಶಾಸಕ ಶರತ್ ಬಚ್ಚೇಗೌಡ ಮತ್ತು ಅವರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡರಿಗೆ ಕೋವಿಡ್‌ ಇರುವುದು ಬುಧವಾರ ದೃಢಪಟ್ಟಿದೆ.

‘ಸೋಮವಾರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂತು. ಆದ ಕಾರಣ ಗಂಟಲು ದ್ರವವನ್ನು ಪರೀಕ್ಷೆಗೆ ನೀಡಿದ್ದೆವು. ಅದರ ವರದಿ ಬಂದಿದ್ದು, ನನಗೆ ಹಾಗೂ ನನ್ನ ಪತ್ನಿಗೆ ಸೋಂಕು ಇರುವುದು ದೃಢಪಟ್ಟಿದೆ. ರೋಗದ ಯಾವುದೇ ಲಕ್ಷಣ ಕಾಣಿಸಿಕೊಂಡಿರಲಿಲ್ಲ’ ಬುಧವಾರ ಹೇಳಿಕೆ ನೀಡಿದ್ದಾರೆ.

‘ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದೇವೆ. ರೋಗನಿರೋಧಕ ಶಕ್ತಿ ಇರುವುದರಿಂದ ಬೇಗ ಗುಣಮುಖರಾಗಿ ಬರುತ್ತೇನೆ ಎಂಬ ನಂಬಿಕೆ ಇದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು