ಬುಧವಾರ, ಫೆಬ್ರವರಿ 19, 2020
30 °C

ನನ್ನ ಯೋಗ್ಯತೆಗೆ ಸಿ.ಎಂ. ಸ್ಥಾನ ಸಿಗಬೇಕು; ಕತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಕ್ಕೇರಿ: ‘ನನ್ನ ಯೋಗ್ಯತೆಗೆ ಯಡಿಯೂರಪ್ಪ ಅವರಿರುವ ಮುಖ್ಯಮಂತ್ರಿ ಸ್ಥಾನ ಸಿಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇನೆ. ದೇವರ ಆಶೀರ್ವಾದ ಇದ್ದರೆ ಮುಂದೆ ನೋಡೋಣ’ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,  ‘ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಿಲ್ಲ. ಇದುವರೆಗೆ ನನ್ನ ಹೆಂಡ್ತಿ ಮೇಲೆಯೇ ಮುನಿಸಿಕೊಂಡಿಲ್ಲ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮೇಲೆ ಏಕೆ ಮುನಿಸಿಕೊಳ್ಳಲಿ‘ ಎಂದರು.

‘ಹೊಸಬರಿಗೆ ಅವಕಾಶ ನೀಡುವ ಉದ್ದೇಶದಿಂದ ನನ್ನನ್ನು ಕೈಬಿಟ್ಟಿರಬಹುದು. ನನ್ನ ನಸೀಬಿನಲ್ಲಿ (ಹಣೆಬರಹ) ಸಚಿವ ಸ್ಥಾನ ಇಲ್ಲ. ಹೀಗಾಗಿ ಸಿಕ್ಕಿಲ್ಲ. 13 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ. ಮುಂದೆ ಸಚಿವ ಸ್ಥಾನ ಸಿಗಬಹುದು. ಸಿಕ್ಕಾಗ ನೋಡೋಣ’ ಎಂದು ನುಡಿದರು.

ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಶ್ರೀಮಂತ ಪಾಟೀಲ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರಿಗೆ ನನಗಿಂತ ಹೆಚ್ಚು ಅನುಭವ ಇದೆ. ಅದಕ್ಕೆ ಅವರಿಗೆ ನೀಡಿರಬಹುದು’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು