‘ಮನೆ ಅಂದ ಮೇಲೆ ಗಲಾಟೆಗಳು ಆಗುತ್ತವೆ; ಯಾವ ಶಾಸಕರೂ ಬಡಿದಾಡಿಲ್ಲ’

7

‘ಮನೆ ಅಂದ ಮೇಲೆ ಗಲಾಟೆಗಳು ಆಗುತ್ತವೆ; ಯಾವ ಶಾಸಕರೂ ಬಡಿದಾಡಿಲ್ಲ’

Published:
Updated:

ಹೊಸಪೇಟೆ: ‘ಕಾಂಗ್ರೆಸ್‌ ಶಾಸಕರಿಬ್ಬರು ಪರಸ್ಪರ ಬಡಿದಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಸತ್ಯಕ್ಕೆ ದೂರವಾಗಿದೆ. ಯಾವ ಶಾಸಕರೂ ಬಡಿದಾಡಿಲ್ಲ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಸ್ಪಷ್ಟಪಡಿಸಿದರು.

ಭಾನುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮನೆ ಅಂದ ಮೇಲೆ ಗಲಾಟೆಗಳು ಆಗುತ್ತ ಇರುತ್ತವೆ. ಕೆಲವು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಶಾಸಕರ ನಡುವೆ ಇರಬಹುದು. ಆದರೆ, ಶಾಸಕರಾದ ಆನಂದ್‌ ಸಿಂಗ್‌ ಹಾಗೂ ಜೆ.ಎನ್‌. ಗಣೇಶ್‌ ಹೊಡೆದಾಡಿಕೊಂಡಿದ್ದಾರೆ ಎಂಬುದು ಸುಳ್ಳು. ಎಲ್ಲ ಶಾಸಕರು ಒಗ್ಗಟ್ಟಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !