ಶುಕ್ರವಾರ, ಏಪ್ರಿಲ್ 3, 2020
19 °C

ವಿಧಾನ ಪರಿಷತ್ ಸದಸ್ಯರಾಗಿ ಲಕ್ಷ್ಮಣ ಸವದಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಬಿಜೆಪಿ ಅಭ್ಯರ್ಥಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ 113 ಮತಗಳನ್ನು ಪಡೆದು ಸೋಮವಾರ ಆಯ್ಕೆಯಾದರು. ವಿಧಾನಸಭೆಯಿಂದ ಪರಿಷತ್‌ನ ಒಂದು ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಸವದಿ ಅಧಿಕಾರ ಅವಧಿ 2022 ಜೂನ್ 14ರ ವರೆಗೆ ಇರುತ್ತದೆ.

ಒಟ್ಟು 120 ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದು, ಅದರಲ್ಲಿ 7 ಮತಗಳು ಅಸಿಂಧುಗೊಂಡಿದ್ದವು. ಕಾಂಗ್ರೆಸ್, ಜೆಡಿಎಸ್ ಶಾಸಕರು ಮತದಾನದಿಂದ ದೂರ ಉಳಿದರು. ವರಿಷ್ಠರ ಸೂಚನೆ ಧಿಕ್ಕರಿಸಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮತ ಚಲಾಯಿಸಿದರು.

ಬಿಜೆಪಿಯಲ್ಲಿ 117 ಶಾಸಕರು ಇದ್ದು, ಅನಾರೋಗ್ಯದಿಂದಾಗಿ ಎಸ್.ಎ.ರಾಮದಾಸ್ ಬಂದಿರಲಿಲ್ಲ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು