ಶನಿವಾರ, ಜುಲೈ 31, 2021
27 °C

ಎಂ.ಎಲ್‌.ಸಿಗೆ ಕೋಲಿ ಸಮಾಜದವರನ್ನೇ ಪರಿಗಣಿಸಿ: ಅವಣ್ಣ ಮ್ಯಾಕೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ವಿಧಾನ ಪರಿಷತ್ತಿನ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಸದಸ್ಯತ್ವ ಅವಧಿ ಮುಗಿಯಲಿದ್ದು, ಅವರ ಸ್ಥಾನಕ್ಕೆ ಕೋಲಿ ಸಮಾಜದವರನ್ನೇ ನೇಮಕ ಮಾಡಬೇಕು ಎಂದು ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಅಧ್ಯಯನ ಅಕಾಡೆಮಿ ಅಧ್ಯಕ್ಷ ಅವಣ್ಣ ಮ್ಯಾಕೇರಿ ಒತ್ತಾಯಿಸಿದರು.

‘ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಕೋಲಿ ಸಮಾಜದವರು ಪ್ರಮುಖ ಪಾತ್ರವಹಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸಮಾಜದವರ ಬೇಡಿಕೆ ಈಡೇರಿಸಲು ಬಿಜೆಪಿ ಗಮನ ಹರಿಸಬೇಕು’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಕೋಲಿ ಸಮಾಜವು ಹಿಂದುಳಿದಿದ್ದು, ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ವಿಧಾನ ಪರಿಷತ್ತಿನ ಸದಸ್ಯ ಸ್ಥಾನ ದೊರತಲ್ಲಿ, ಸಮಾಜಕ್ಕೆ ನ್ಯಾಯ ಸಿಗುತ್ತದೆ ಮತ್ತು ಮುಂಚೂಣಿಗೆ ಬರಲು ಸಾಧ್ಯವಾಗುತ್ತದೆ’ ಎಂದು ಅವರು ವಿವರಿಸಿದರು.

‘ಕೋಲಿ ಸಮಾಜದ ಪ್ರಮುಖ ರಾಜಕೀಯ ನಾಯಕರಲ್ಲಿ ಯಾರನ್ನೇ ನೇಮಕ ಮಾಡಿದರೂ ನಮ್ಮದೇನೂ ಅಭ್ಯಂತರವಿಲ್ಲ. ಎಲ್ಲಾ ರೀತಿಯ ಭಿನ್ನಾಭಿಪ್ರಾಯ ಬದಿಗಿಟ್ಟು ಪಕ್ಷವು ನೇಮಿಸಿದವರನ್ನು ಸ್ವಾಗತಿಸಲಾಗುವುದು’ ಎಂದು ಮ್ಯಾಕೇರಿ ತಿಳಿಸಿದರು. ಸಮಾಜದ ಮುಖಂಡರಾದ ದಯಾನಂದ ಕಟ್ಟಿಮನಿ, ಮಲ್ಲಿಕಾರ್ಜುನ ಎಮ್ಮೆಗನೂರ, ಶಿವಕುಮಾರ ಯಾಗಪುರ, ವಿಜಯಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು