ರಾಮನಗರ:‘ನಾನು ಜೆಡಿಎಸ್ ಬಿಡಲು ತೀರ್ಮಾನಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಪ್ರಕಟ ಮಾಡುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.

ನಗರದಲ್ಲಿ ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಜೆಡಿಎಸ್ ನ ಬಹುತೇಕ ಪರಿಷತ್ ಸದಸ್ಯರು ಇದೇ ತೀರ್ಮಾನಕ್ಕೆ ಬಂದಿದ್ದಾರೆ. ಬಸವರಾಜ ಹೊರಟ್ಟಿ ಅವರೂ ಈ ಬಗ್ಗೆ ಮಾತನಾಡಿದ್ದು, ಚರ್ಚೆ ಮಾಡೋಣ ಎಂದಿದ್ದಾರೆ. ಆದರೆ ಈಗಲೇ ನಾನು ಎಲ್ಲವನ್ನು ಹೇಳಲು ಆಗದು. ಮುಂದಿನ ದಿನಗಳಲ್ಲಿ ಎಲ್ಲವನ್ನು ಸ್ಪಷ್ಟಪಡಿಸುತ್ತೇನೆ’ ಎಂದರು.

ನಿಮಗೆ ಆಗಿರುವ ನೋವನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಕೆಲವರಿಗೆ ಯಾರಿಗೆ ನೋವಾದ್ರೂ, ಯಾರು ಸತ್ತರೂ ಏನು ಅನಿಸಲ್ಲ’ ಎಂದು ಪರೋಕ್ಷವಾಗಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.