ಗುರುವಾರ , ಸೆಪ್ಟೆಂಬರ್ 23, 2021
22 °C

ನರೇಗಾ: ಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ತಾಲ್ಲೂಕಿನ ಯದ್ಲಾಪುರದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬುಧವಾರ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕುಸಿದು ಸಾವನ್ನಪ್ಪಿದ್ದಾರೆ.

ಯಲ್ಲಪ್ಪ (55) ಮೃತಪಟ್ಟವರು. ಬಿಸಿಲಿನ ತಾಪದಿಂದ ಮೃತಪಟ್ಟಿದ್ದು, ಪರಿಹಾರ ನೀಡಬೇಕು ಎಂದು ಕೂಲಿ ಕಾರ್ಮಿಕರು ಅಧಿಕಾರಿಗಳನ್ನು 
ಒತ್ತಾಯಿಸಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಕೆಲಸದ ಅವಧಿ ಕಡಿತ ಮಾಡಬೇಕು ಎನ್ನುವುದಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು