ಮಂಗಳವಾರ, ಸೆಪ್ಟೆಂಬರ್ 21, 2021
26 °C

ಉದ್ಯೋಗ ಖಾತ್ರಿ ಕೆಲಸದ ದಿನ ಹೆಚ್ಚಳ: ಕೃಷಿ ಸಚಿವ ಬಂಡೆಪ್ಪ ಕಾಶೆಂಪುರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ‘ಬರಪೀಡಿತ ಪ್ರದೇಶಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ವರ್ಷಕ್ಕೆ 150 ದಿನಕ್ಕಿಂತ ಹೆಚ್ಚು ದಿನ ಕೆಲಸ ಕೊಡಲಾಗುವುದು. ಇದು ಫೆ. 1ರಿಂದಲೇ ಜಾರಿಗೆ ಬರಲಿದೆ’ ಎಂದು ಕೃಷಿ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದರು.

ಬರಪೀಡಿತ ಕೊಟ್ಟೂರಿನ ಅಲಬೂರು ಗ್ರಾಮದಲ್ಲಿ ಗುರುವಾರ ಬರ ವೀಕ್ಷಣೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬರಗಾಲದಲ್ಲಿ ಯಾವುದೇ ನಿಯಮ ಬೇಡ. 150 ದಿನ ಕೆಲಸ ಮಾಡಿದವರಿಗೂ ಪುನಃ ಹೆಸರು ನೋಂದಣಿ ಮಾಡಿಸಿಕೊಂಡು ಕೆಲಸ ಕೊಡಬೇಕು. ಬರಗಾಲ ದೂರವಾಗುವವರೆಗೆ ಇದು ಮುಂದುವರಿಯಲಿದೆ’ ಎಂದು ತಿಳಿಸಿದರು.

‘ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ನೆರವಿಗೆ ಬರುವುದು ಸರ್ಕಾರದ ಕರ್ತವ್ಯ. ನಿಯಮಕ್ಕೆ ಅಂಟಿಕೊಂಡು ಕೆಲಸ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ ನಿಯಮ ಸಡಿಲಗೊಳಿಸಲಾಗುತ್ತಿದೆ. ಅಷ್ಟೇ ಅಲ್ಲ, ಕೂಲಿ ಕೂಡ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ. ಬರಪೀಡಿತ ಪ್ರದೇಶದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕುಡಿಯುವ ನೀರು, ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಆಯಾ ಜಿಲ್ಲಾ ಆಡಳಿತಕ್ಕೆ ಸೂಚನೆ ಕೊಡಲಾಗಿದೆ’ ಎಂದು ಮಾಹಿತಿ ನೀಡಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು