ಸೋಮವಾರ, ಜುಲೈ 13, 2020
29 °C

ಮೊಬೈಲ್‌ ಗೇಮ್‌ ಜೂಜಾಟ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೊಬೈಲ್‌ ಫೋನ್‌ನಲ್ಲಿ ಗ್ರೂಪ್‌ ಮಾಡಿಕೊಂಡು ಆನ್‌ಲೈನ್‌ನಲ್ಲಿ ಜೂಜಾಟ ಆಡುತ್ತಿದ್ದ ಮೂರು ಮಂದಿಯನ್ನು ಹೆಣ್ಣೂರು ಮುಖ್ಯ ರಸ್ತೆಯ ಲಿಂಗರಾಜಪುರ ಬಸ್‌ ನಿಲ್ದಾಣ ಬಳಿಯಿಂದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುನಿರಾಜು (26), ಶಂಕರಪ್ಪ (46) ಮತ್ತು ಮೊಹಮ್ಮದ್‌ ಜಬೀರ್‌ (46) ಬಂಧಿತರು. ಆರೋಪಿಗಳಿಂದ ಎರಡು ಮೊಬೈಲ್‌ ₹ 1700 ನಗದು ವಶಪಡಿಸಿಕೊಂಡಿದ್ದಾರೆ. ಈ ಜೂಜಾಟ ದಂಧೆಯ ಪ್ರಮುಖ ಆರೋಪಿ ಕಿಶೋರ್‌ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ಆರೋಪಿಗಳು ಹಣ ಕಟ್ಟಿಸಿಕೊಂಡು ಪೋಕರ್ ಗೇಮ್‌ ಮೂಲಕ ಜೂಜಾಟ ಆಡುತ್ತಿದ್ದರು. ಪಾರ್ಕಿಂಗ್‌ಪ್ಲೇ ಮೂಲಕ ಕಿಶೋರ್‌ ಈ ಅದೃಷ್ಟದಾಟಕ್ಕೆ ಹಣ ಕಟ್ಟಿಸಿಕೊಳ್ಳುತ್ತಿದ್ದು, ಆತನ ಪತ್ತೆ ಕಾರ್ಯ ಮುಂದುವರಿದಿದೆ ಎಂದೂ ಹೇಳಿದರು.

ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು