ಭಾನುವಾರ, ಜನವರಿ 19, 2020
24 °C
ದಿವಾಳಿಯತ್ತ ರಾಜ್ಯ ಸರ್ಕಾರ– ಸಿದ್ದರಾಮಯ್ಯ

ಬಿಎಸ್‌ವೈ ಅವಮಾನಿಸುತ್ತಿರುವ ಮೋದಿ, ಶಾ: ಸಿದ್ದರಾಮಯ್ಯ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ಅನುದಾನ ಕೋರಿ ಬೇಡಿಕೆ ಸಲ್ಲಿಸಲು ಅವಕಾಶ ನೀಡದೆ ಅವಮಾನಿಸುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ‘ಬಾರದ ಕೇಂದ್ರದ ಹಣ’– ವರದಿಯನ್ನು ಟ್ವೀಟ್‌ಗೆ ಟ್ಯಾಗ್‌ ಮಾಡಿದ್ದು, ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಹಣ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಮೇಲಿನ ದ್ವೇಷಕ್ಕೆ ರಾಜ್ಯದ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ ಎಂದು ಟೀಕಿಸಿದ್ದಾರೆ.

‘ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲವಾಗಿದ್ದು, ದಿವಾಳಿಯಾಗುತ್ತಿದೆ. ಕೇಂದ್ರವು ಹಣ ಕೊಡುತ್ತಿಲ್ಲ’ ಎಂದು ಆರೋಪಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು