ಸೋಮವಾರ, ಜೂನ್ 1, 2020
27 °C

ಪ್ರಧಾನಿ ಅಭಿನಂದನೆಗೆ ಅಭಿಯಾನ ವಿವಾದ ಸಂಚು ಎಂದ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನರೇಂದ್ರ ದಾಮೋದರ ದಾಸ್ ಮೋದಿ ಅವರು ದೇಶಕ್ಕಾಗಿ ತುಂಬಾ ಕೆಲಸ ಮಾಡಿದ್ದಾರೆ. ಇದೇ ಭಾನುವಾರ ಏಪ್ರಿಲ್ 12ರ ಸಂಜೆ ಐದು ಗಂಟೆಗೆ ಚಪ್ಪಾಳೆ ಹೊಡೆದು ಅವರಿಗೆ ಅಭಿನಂದನೆ ಸಲ್ಲಿಸೋಣ. ಐದು ಗಂಟೆಗೆ ನಿಮ್ಮ ಬಾಲ್ಕನಿಯಲ್ಲಿ ನಿಂತು, ಮೋದಿ ಅವರನ್ನು ಅಭಿನಂದಿಸಿ’ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಇದು ನನ್ನನ್ನು ವಿವಾದಕ್ಕೆ ಸಿಲುಕಿಸುವ ಪ್ರಯತ್ನ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌ ಮತ್ತು ಫೇಸ್‌ಬುಕ್‌ಗಳಲ್ಲಿ ಈ ಪೋಸ್ಟರ್ ಹರಿದಾಡುತ್ತಿದೆ. ವಾಟ್ಸ್‌ಆ್ಯಪ್‌ ಗುಂಪುಗಳಲ್ಲೂ ಇದು ವೈರಲ್ ಆಗಿದೆ. ಆದರೆ, ಇಂತಹ ಅಭಿನಂದನೆಯ ಅವಶ್ಯಕತೆ ಇಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘ನನಗೆ ಅಭಿನಂದಿಸಬೇಕು ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ನನ್ನನ್ನು ವಿವಾದಕ್ಕೆ ಸಿಲುಕಿಸುವ ಪ್ರಯತ್ನ ಎಂದು ನನಗೆ ಅನಿಸುತ್ತಿದೆ’ ಎಂದು ಮೋದಿ ಟ್ವೀಟ್‌ನಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ.

‘ಇದು ಒಳ್ಳೆಯ ಉದ್ದೇಶದ ಪ್ರಯತ್ನವೂ ಆಗಿರಬಹುದು. ನನಗೆ ಸನ್ಮಾನ ಮಾಡಬೇಕು ಎಂದುಕೊಂಡಿದ್ದರೆ, ಕೊರೊನಾ ಹಾವಳಿ ಮುಗಿಯುವವರೆಗೂ ಒಂದು ಬಡ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಿ. ಅದೇ ನನಗೆ ನೀವು ಮಾಡುವ ಸನ್ಮಾನ’ ಎಂದೂ ಮೋದಿ ಹೇಳಿದ್ದಾರೆ. ಪ್ರಸಾರ ಭಾರತಿ ಸಹ ಈ ಪೋಸ್ಟರ್‌ ಬಗ್ಗೆ ಟ್ವೀಟ್ ಮಾಡಿದ್ದು, ಈ ಪೋಸ್ಟರ್‌ಗೆ ಯಾರೂ ಗಮನ ಕೊಡಬೇಡಿ ಎಂದು ಕೇಳಿಕೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು