ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತ ಮಗುವಿಗೆ ಏಮ್ಸ್‌ನಲ್ಲಿ ಚಿಕಿತ್ಸೆ

Last Updated 1 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: 28 ವರ್ಷ ವಯಸ್ಸಿನ ಸಂಬಂಧಿ ಯುವಕನಿಂದ ಅತ್ಯಾಚಾರಕ್ಕೊಳಗಾದ 8 ತಿಂಗಳ ಮಗುವಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ(ಎಐಐಎಂಎಸ್‌) ಸ್ಥಳಾಂತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ಪೀಠವು, ಇಡೀ ದೇಶದಲ್ಲಿ ಇತ್ಯರ್ಥವಾಗಲು ಬಾಕಿ ಉಳಿದಿರುವ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಕೇಂದ್ರ ಮತ್ತು ದೂರುದಾರರ ಪರ ವಕೀಲರಿಗೆ ಕೇಳಿದೆ. ದೇಶದ ಹಿತದೃಷ್ಟಿಯಿಂದ ಇಂತಹ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮಾರ್ಗೋಪಾಯ ಕಂಡು ಹಿಡಿಯಲು ಇದು ಸಹಕಾರಿಯಾಗಲಿದೆ ಎಂದು ಪೀಠ ಹೇಳಿದೆ.

ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪಿ.ಎಸ್‌. ನರಸಿಂಹನ್‌ ಮತ್ತು ಪಿಂಕಿ ಆನಂದ್‌ ಕೇಂದ್ರ ಸರ್ಕಾರದ ಪರ ಹಾಜರಾಗಿ ಕೋರ್ಟ್‌ ಆದೇಶವನ್ನು ಪಾಲಿಸುತ್ತಿರುವುದಾಗಿ ತಿಳಿಸಿದರು. ಎಐಐಎಂಎಸ್‌ನ ವೈದ್ಯರ ತಂಡ ಮಗು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿತ್ತು. ನಂತರ ಎಐಐಎಂಎಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT