ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಮೀಸಲು ಮಸೂದೆ ಜಾರಿಗೆ ಮೋದಿ ಪ್ರಾಮಾಣಿಕ ಪ್ರಯತ್ನ ಮಾಡಲಿ: ದೇವೇಗೌಡ 

Last Updated 8 ಮಾರ್ಚ್ 2020, 6:09 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆಗೆ ಶುಭ ಕೋರಿರುವ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ಮಹಿಳಾ ಮೀಸಲು ಮಸೂದೆಯನ್ನು ಜಾರಿಗೆ ತರಬೇಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನಾಡಿನ ಸಮಸ್ತ ಮಹಿಳೆಯರಿಗೆ ವಿಶ್ವ ಮಹಿಳಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಮಹಿಳೆಯರು ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಪ್ರಬಲವಾದರೆ ಮಾತ್ರ ನಮ್ಮ ದೇಶ ಅಭಿವೃದ್ಧಿಯಾಗಲು ಸಾಧ್ಯ. ಈ ಕಾರಣದಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ, ಸರ್ಕಾರಿ ಕೆಲಸಗಳಲ್ಲಿ 'ಮಹಿಳಾ ಮೀಸಲಾತಿ'ಯನ್ನು ಜಾರಿಗೆ ತಂದಿದ್ದೆ,’ ಎಂದು ಅವರು ಹೇಳಿದ್ದಾರೆ.

'ಲೋಕಸಭೆ ಹಾಗೂ ವಿಧಾನಸಭೆಯಲ್ಲಿ 'ಮಹಿಳೆಯರಿಗೆ ಮೀಸಲಾತಿ' ಕಲ್ಪಿಸಲು ನಾನು 1996ರಲ್ಲಿ ಪ್ರಧಾನಿಯಾದ ಸಂದರ್ಭದಲ್ಲಿ ಮಸೂದೆಯನ್ನು ಮಂಡನೆ ಮಾಡಿದ್ದೆ. ಈ 'ಮಹಿಳಾ ಮೀಸಲಾತಿ ಮಸೂದೆ'ಯನ್ನು ಜಾರಿಮಾಡಲು ಪ್ರಧಾನಿ ಅವರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ,’ ಎಂದಿದ್ದಾರೆ.

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲು ಕಲ್ಪಿಸುವ ಮಹಿಳಾ ಮೀಸಲು ಮಸೂದೆಯು ಸಂಸತ್‌ನ ಒಪ್ಪಿಗೆಗಾಗಿ ಬಾಕಿ ಇದೆ. ಈ ಮಸೂದೆಯು 1996ರ ಸೆ. 12ರಂದು, ದೇವೇಗೌಡರ ಸಂಯುಕ್ತ ರಂಗದ ಅಧಿಕಾರವಧಿಯಲ್ಲಿ ಮೊದಲ ಬಾರಿಗೆ ಮಂಡನೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT