ಚಳ್ಳಕೆರೆ ತಾಲ್ಲೂಕಿನ ಡಿಆರ್‌ಡಿಒಗೆ ಮೋದಿ ಭೇಟಿ: ಕಾಂಗ್ರೆಸ್ ಆಕ್ಷೇಪ

ಬುಧವಾರ, ಏಪ್ರಿಲ್ 24, 2019
29 °C

ಚಳ್ಳಕೆರೆ ತಾಲ್ಲೂಕಿನ ಡಿಆರ್‌ಡಿಒಗೆ ಮೋದಿ ಭೇಟಿ: ಕಾಂಗ್ರೆಸ್ ಆಕ್ಷೇಪ

Published:
Updated:

ಚಿತ್ರದುರ್ಗ/ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ರ‍್ಯಾಲಿ ಚಿತ್ರದುರ್ಗದ ವಿಜ್ಞಾನ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆಯಲಿದೆ.

ಆದರೆ, ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಬರುತ್ತಿರುವ ಮೋದಿ ಅವರು ಡಿಆರ್‌ಡಿಒ ವಿಮಾನ ನಿಲ್ದಾಣ ಬಳಕೆ ಮಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ ಸೇರಿ ಇತರ ರಾಜಕೀಯ ಪಕ್ಷಗಳ ನಾಯಕರು ಇದಕ್ಕೆ ಆಕ್ಷೇಪ ವ್ಯಕ್ತ
ಪಡಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶವಿದೆಯೇ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

‘ಪ್ರಧಾನಿ ಹುದ್ದೆಯಲ್ಲಿರುವವರಿಗೆ ಮಾತ್ರ ಇಂತಹದೊಂದು ವಿನಾಯಿತಿ ಇದೆ. ಭದ್ರತೆಯ ದೃಷ್ಟಿಯಿಂದ ಡಿಆರ್‌ಡಿಒ ವಿಮಾನ ನಿಲ್ದಾಣ ಬಳಸಲಾಗುತ್ತಿದೆ. ಅಲ್ಲಿ ಅಧಿಕೃತ ಕಾರ್ಯಕ್ರಮಗಳು ಇಲ್ಲದಿರುವುದರಿಂದ ನೀತಿ ಸಂಹಿತೆಯ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ಅರುಣ್‌ ಸ್ಪಷ್ಟನೆ ನೀಡಿದ್ದಾರೆ.

ಚಳ್ಳಕೆರೆಯಲ್ಲಿ ಡಿಆರ್‌ಡಿಒ ಸ್ಥಾಪನೆಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿ ಅಲ್ಲಿಗೆ ನೀಡುತ್ತಿದ್ದಾರೆ.

ಮೈಸೂರಿನಲ್ಲಿ ಪ್ರಚಾರ

ಮೋದಿ ಅವರು ಮಂಗಳವಾರ ಮೈಸೂರಿನಲ್ಲಿ ಬಿಜೆಪಿ ಆಯೋಜಿಸಿರುವ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡು ಪ್ರಚಾರ ನಡೆಸಲಿದ್ದಾರೆ.

ಚಿತ್ರದುರ್ಗದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಂಡು ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಮಧ್ಯಾಹ್ನ 4 ಗಂಟೆಗೆ ಸಮಾವೇಶ ನಡೆಯಲಿದೆ.

ಬರಹ ಇಷ್ಟವಾಯಿತೆ?

 • 15

  Happy
 • 3

  Amused
 • 1

  Sad
 • 0

  Frustrated
 • 8

  Angry

Comments:

0 comments

Write the first review for this !