ಶುಕ್ರವಾರ, ಏಪ್ರಿಲ್ 10, 2020
19 °C

ಭಾರತ್ ಬಂದ್: ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಪ್ರತಿಭಟನೆಯಲ್ಲಿ ಭಾಗಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ತೈಲ ಬೆಲೆ ಏರಿಕೆ ವಿರುದ್ಧ ಸೋಮವಾರ ನಡೆದ ಭಾರತ್ ಬಂದ್ ವೇಳೆ ನಗರದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮದ್ ನಲಪಾಡ್ ಕಾಣಿಸಿಕೊಂಡಿದ್ದಾರೆ.
ಉದ್ಯಮಿ ಲೋಕನಾಥ್‌ ಅವರ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಮೊಹಮದ್ ನಲಪಾಡ್, ಪ್ರತಿಭಟನೆ ವೇಳೆ ಹ್ಯಾರಿಸ್ ಜತೆ ಕಾಂಗ್ರೆಸ್ ಶಾಲು ಧರಿಸಿ ನಿಂತಿದ್ದರು.

6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಮಹಮ್ಮದ್ ನಲಪಾಡ್ ಅವರನ್ನು ಉಚ್ಛಾಟನೆ ಮಾಡಲಾಗಿತ್ತು. ಪಕ್ಷದಿಂದ ಉಚ್ಛಾಟನೆಗೊಂಡಿದ್ದರೂ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಗ್ಗೆ ದಿ ನ್ಯೂಸ್ ಮಿನಿಟ್ ನಲಪಾಡ್ ಅವರನ್ನು ಸಂಪರ್ಕಿಸಿದ್ದು, ಪಕ್ಷದ ಕಾರ್ಯದಲ್ಲಿ ಅಧಿಕೃತವಾಗಿ ತೊಡಗಿಸಿಕೊಂಡಿದ್ದೀರಾ? ಎಂಬ ಪ್ರಶ್ನೆ ಕೇಳಿದೆ.  ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ನಲಪಾಡ್, ಈ ಬಗ್ಗೆ ನಾನು ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಫೆಬ್ರುವರಿ 17 ರಂದು ವಿದ್ವತ್ ಮೇಲೆ ನಲಪಾಡ್ ನಡೆಸಿದ ಹಲ್ಲೆ ಪ್ರಕರಣವನ್ನು ಹಲವಾರು ಕಾಂಗ್ರೆಸ್ ಮುಖಂಡರು ಖಂಡಿಸಿದ್ದರು. ಜೂನ್  15 ರಂದು ನಲಪಾಡ್‍ಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು