ಶುಕ್ರವಾರ, ಜೂನ್ 5, 2020
27 °C

ಮೋಹನ್ ಭಾಗವತ್‌ ಹತ್ಯೆ ಸಂಚು ಖಂಡನೀಯ: ಬಿ.ಸಿ.ಪಾಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್  ಹತ್ಯೆ  ಸಂಚು ಖಂಡನೀಯ ಎಂದು ಕೃಷಿ ಸಚಿವರಾದ ಬಿ‌.ಸಿ.ಪಾಟೀಲ್ ಹೇಳಿದ್ದಾರೆ.

ವಿಧಾನಸಭೆ ಕಲಾಪಕ್ಕೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ ಪಾಟೀಲ್‌, ‘ರಾಷ್ಟ್ರೀಯವಾದಿಗಳ ಮೇಲಿನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ  ವಿಚಾರವನ್ನು ಗುಪ್ತಚರ ಇಲಾಖೆ ನೀಡಿದೆ ಎಂಬುದು ತಿಳಿದುಬಂದಿದೆ‌. ಈ ಬಗ್ಗೆ ಗೃಹ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡುವೆ,’ ಎಂದು ತಿಳಿಸಿದರು. 

‘ಆರ್‌ಎಸ್‌ಎಸ್‌ ಮುಖಂಡರನ್ನು ಹತ್ಯೆ ಮಾಡಲು ಹಾಗೂ ಆರ್‌ಎಸ್‌ಎಸ್ ಕಚೇರಿ ಮೇಲೆ ದಾಳಿ ನಡೆಯುವ ಬಗ್ಗೆ 'ಗ್ಲೋಬಲ್ ಟೆರರಿಸ್ಟ್ ಗ್ರೂಪ್‌’ನಲ್ಲಿ ಮಾಹಿತಿ ಹರಿದಾಡುತ್ತಿದೆ’ ಎಂದು ಕೇಂದ್ರ ಗುಪ್ತದಳದ ಅಧಿಕಾರಿಗಳು, ರಾಜ್ಯದ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು