ಶೀಘ್ರದಲ್ಲೇ ಕಲಾವಿದರ ಖಾತೆಗೆ ಹಣ ಜಮೆ

ಬೆಂಗಳೂರು: ‘ಹತ್ತು ಸಾವಿರ ಕಲಾವಿದರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ₹ 2 ಕೋಟಿ ಮೀಸಲಟ್ಟಿದೆ. ಸಂಕಷ್ಟದಲ್ಲಿರುವ ಜಾನಪದ ಕಲಾವಿದರಿಗೆ ಶೀಘ್ರದಲ್ಲಿಯೇ ಅಗತ್ಯ ನೆರವು ಸಿಗಲಿದೆ’ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ ತಿಳಿಸಿದ್ದಾರೆ.
‘ಪರಿಷತ್ತಿನಿಂದ ಕಲಾವಿದರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಅವರಿಗೆ ನೀಡಲಾಗಿದೆ. ಮುಖ್ಯಮಂತ್ರಿಗಳ ಜತೆಯೂ ಈ ಬಗ್ಗೆ ಚರ್ಚಿಸಲಾಗಿದೆ. ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಕಲಾವಿದರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಲಿದೆ’ ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.