ಮಂಗನ ಕಾಯಿಲೆಗೆ ಇನ್ನೊಂದು ಬಲಿ

7

ಮಂಗನ ಕಾಯಿಲೆಗೆ ಇನ್ನೊಂದು ಬಲಿ

Published:
Updated:

ತೀರ್ಥಹಳ್ಳಿ: ಮಂಗನ ಕಾಯಿಲೆಯಿಂದ ತಾಲ್ಲೂಕಿನ ಸಿಂಗನಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟದಕೊಪ್ಪ ಗ್ರಾಮದ ಲಚ್ಚಪೂಜಾರಿ (75) ಶುಕ್ರವಾರ ಮೃತಪಟ್ಟಿದ್ದಾರೆ.

ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ತೋಟದಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ತೋಟದಕೊಪ್ಪ ಗ್ರಾಮವೊಂದರಲ್ಲಿಯೇ 6 ಮಂದಿಗೆ ಕಾಯಿಲೆ ಇರುವುದು ದೃಢಪಟ್ಟಿದೆ. ಗ್ರಾಮದ ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಸುರೇಶ್ ಅವರಿಗೂ ರೋಗ ಕಾಣಿಸಿಕೊಂಡಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಕಿರಣ್ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 16 ಮಂದಿಯಲ್ಲಿ ಕಾಯಿಲೆ ವೈರಾಣು ಇರುವುದು ದೃಢಪಟ್ಟಿದೆ. ಆಗುಂಬೆ ವಲಯ ಅರಣ್ಯ ಸಿಬ್ಬಂದಿಯೊಬ್ಬರಲ್ಲಿ ಕೂಡ ಕಾಯಿಲೆ ಕಾಣಿಸಿಕೊಂಡಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !