ಶನಿವಾರ, ಜನವರಿ 18, 2020
21 °C

ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ: ಆಸ್ಪತ್ರೆಗೆ ಯುವಕ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಕಳೆದ ವರ್ಷ ತಾಲ್ಲೂಕಿನಲ್ಲಿ 16ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದ ಮಂಗನ ಕಾಯಿಲೆ ವೈರಾಣು ಈಗ ಮತ್ತೊಮ್ಮೆ ಕಾಣಿಸಿಕೊಂಡಿದೆ.

ಭಾನ್ಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜರವಳ್ಳಿ ಗ್ರಾಮದ ಭರತ್ ಎಂಬ ಯುವಕನಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದಾರೆ.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ವರ್ಷವೂ ಮಂಗನ ಕಾಯಿಲೆ ವೈರಾಣು ಕಾಣಿಸಿಕೊಂಡಿರುವುದರಿಂದ ಆರೋಗ್ಯ ಇಲಾಖೆ ರೋಗ ಹರಡುವುದನ್ನು ತಡೆಯಲು ಸಮರೋಪಾದಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘1950ರ ದಶಕದಲ್ಲಿ ಕಂಡುಹಿಡಿದಿದ್ದ ಚುಚ್ಚುಮದ್ದನ್ನೇ ಮಂಗನ ಕಾಯಿಲೆ ಪೀಡಿತ ಪ್ರದೇಶಗಳ ಜನರಿಗೆ ಮುಂಜಾಗ್ರತಾ ಕ್ರಮವಾಗಿ ನೀಡಲಾಗುತ್ತಿದೆ. ಈ ಸಂಬಂಧ ಹೊಸ ಸಂಶೋಧನೆಗೆ ಸರ್ಕಾರ ಮುಂದಾಗಬೇಕು. ಮಣಿಪಾಲದ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯಲು ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

 

ಪ್ರತಿಕ್ರಿಯಿಸಿ (+)