ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಲ್ಲಿ ಮುಂಗಾರು ಚುರುಕು, 14, 15ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆ 

Last Updated 13 ಜೂನ್ 2020, 13:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಇದೇ 14 ಮತ್ತು 15ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎರಡೂ ದಿನಗಳು 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ಜೂನ್ 15ರ ನಂತರ ಕರಾವಳಿಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಅಂಕೋಲಾದಲ್ಲಿ ಗರಿಷ್ಠ ಮಳೆ: ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಶನಿವಾರ 20 ಸೆಂ.ಮೀ ಅತೀ ಹೆಚ್ಚು ಮಳೆಯಾಗಿದೆ. ಕೋಟ, ಕೊಲ್ಲೂರು 9, ಕುಂದಾಪುರ, ಹೊನ್ನಾವರ 8, ಗೋಕರ್ಣ, ಸಿದ್ದಾಪುರ 6, ಕಾರವಾರ 5, ಕಾರ್ಕಳ 4, ಮೂಡುಬಿದ್ರೆ, ಮಂಗಳೂರು, ನಿಪ್ಪಾಣಿ, ಹೊಸನಗರ 3, ಚಿಕ್ಕೋಡಿ, ಹುಂಚದಕಟ್ಟೆ ಹಾಗೂ ಕಮ್ಮರಡಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೊಪ್ಪಳದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT