ಶನಿವಾರ, ಸೆಪ್ಟೆಂಬರ್ 18, 2021
28 °C
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ಜೇವರ್ಗಿ: ಕೊಚ್ಚಿಹೋದ ಸೇತುವೆ, ಕರಾವಳಿಯಲ್ಲಿ ವ್ಯಾಪಕ ಮಳೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಸೇರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಆಗಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯ ಹೊರವಲಯದಲ್ಲಿ ಸೇತುವೆ ಕೊಚ್ಚಿಹೋಗಿದೆ.

ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಜೇವರ್ಗಿ ಹೊರವಲಯದ ಹಳ್ಳದ ಸೇತುವೆ ಕೊಚ್ಚಿಹೋಗಿದೆ. ಇದರಿಂದ ಗುರುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪ‍ರೀಕ್ಷಾ ಕೇಂದ್ರಕ್ಕೆ ತೆರಳಲು ಪರದಾಡುವಂತಾಯಿತು.

ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಗೆ ತೆರಳುವ ರಸ್ತೆಯಲ್ಲಿಯ ಹಳ್ಳದ ಸೇತುವೆ ಮುಕ್ಕಾಲು ಭಾಗ ಕೊಚ್ಚಿಹೋಗಿದ್ದು, ಶಾಲೆಯ ಆವರಣಗೋಡೆ ರಾತ್ರಿಯೇ ಕುಸಿದಿತ್ತು. ಈ ಶಾಲೆಯಲ್ಲೇ ಪರೀಕ್ಷಾ ಕೇಂದ್ರ ಇದೆ. ಅಗ್ನಿಶಾಮಕ ದಳ ಮತ್ತು ಪುರಸಭೆಯವರು ಹಳ್ಳಕ್ಕೆ ಅಡ್ಡಲಾಗಿ ಏಣಿ ಇಟ್ಟು ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದರು.

ಬೀದರ್‌ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ನಾಲೆಗಳು ತುಂಬಿ ಹರಿಯುತ್ತಿವೆ.

ಉತ್ತಮ ಮಳೆ: ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ಬಳ್ಳಾರಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮಧ್ಯಾಹ್ನ ಮಳೆಯಾಗಿದೆ.

ಧಾರಾಕಾರ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರಿನಲ್ಲೂ ಸಾಧಾರಣ ಮಳೆಯಾಗಿದೆ.

ಕರಾವಳಿಯಲ್ಲಿ ವ್ಯಾಪಕ ಮಳೆ?
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 5ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾ
ಗುವ ನಿರೀಕ್ಷೆಯಿದ್ದು, ಜು.3ರಿಂದ 5ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಿಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಕೊಲ್ಲೂರಿನಲ್ಲಿ ಗುರುವಾರ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಗೋಕರ್ಣ 6 ಸೆಂ.ಮೀ. ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು