ಶನಿವಾರ, ಡಿಸೆಂಬರ್ 7, 2019
25 °C

ಜುಲೈ12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜುಲೈ 12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. 

ಎಸ್‌ಟಿ ಮೀಸಲಾತಿ ಸಂಬಂಧ ಸಮಿತಿ ರಚನೆ ಮಾಡಬಹುದೆ ಅಥವಾ ಆಯೋಗ ರಚಿಸಬಹುದೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಸರ್ಕಾರ ಸೂಚನೆ ನೀಡಿದೆ. 

ಜುಲೈ 2ನೇ ವಾರದಲ್ಲಿ ಮೈಸೂರು ಹಾಗೂ ಹುಬ್ಬಳ್ಳಿ ಕೇಂದ್ರವಾಗಿಟ್ಟುಕೊಂಡು ಮೋಡ ಬಿತ್ತನೆ ಮಾಡಲಾಗುವುದು. ರೆಡಾರ್ ತರಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಎರಡೂ ಕೇಂದ್ರಗಳಿಂದ ಏಕ ಕಾಲದಲ್ಲಿ ಮೋಡ ಬಿತ್ತನೆ ಮಾಡಲಾಗುತ್ತದೆ. 

ರಾಜ್ಯದ 2.20 ಕೋಟಿ ರೈತರ ಹೊಲಗಳ ಬೆಳೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಆ್ಯಪ್ ಆಧಾರಿತ ಸಮೀಕ್ಷೆ ಇದಾಗಿದ್ದು, ₹90 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ.

ಜತೆಗೆ, ಈ ವರ್ಷ ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯನ್ನು ಮುಂದುವರಿಸಲಾಗುತ್ತದೆ.  ರಾಜ್ಯದ ಪಾಲು ₹546 ಕೋಟಿ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು