ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೆನಾಡಿನಲ್ಲಿ ಉತ್ತಮ ಮಳೆ: ತುಂಗಭದ್ರೆ ಒಳಹರಿವು ಹೆಚ್ಚಳ

Last Updated 8 ಜುಲೈ 2020, 12:01 IST
ಅಕ್ಷರ ಗಾತ್ರ

ಹೊಸಪೇಟೆ: ಮಲೆನಾಡಿನಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಕಳೆದ ಎರಡು ದಿನಗಳಿಂದ ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಸತತ ಹೆಚ್ಚಾಗುತ್ತಿದೆ.

ಬುಧವಾರ 7,321 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಮಂಗಳವಾರ 2,532 ಕ್ಯುಸೆಕ್‌ ಒಳಹರಿವು ಇತ್ತು. 1,633 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,592.36 ಅಡಿ ನೀರಿನ ಸಂಗ್ರಹವಿದೆ.

‘ಶಿವಮೊಗ್ಗದ ತುಂಗಾ ಜಲಾಶಯ ಭರ್ತಿ ಆಗಿರುವುದರಿಂದ ಕ್ರಸ್ಟ್‌ಗೇಟ್ ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುರುವಾರ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ತಿಳಿಸಿದೆ.

ಮಳೆ: ಹೊಸಪೇಟೆ ನಗರ ಸೇರಿದಂತೆ ಸುತ್ತಮುತ್ತ ಬೆಳಿಗ್ಗೆಯಿಂದ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಬೆಳಿಗ್ಗೆಯಿಂದಲೇ ಕಾರ್ಮೋಡ ಇದೆ. ಆಗೊಮ್ಮೆ, ಈಗೊಮ್ಮೆ ಮಳೆ ಸುರಿಯುತ್ತಿರುವ ಕಾರಣ ವಾತಾವರಣ ಸಂಪೂರ್ಣ ತಂಪಾಗಿದೆ. ಮೂರು ದಿನಗಳಿಂದ ಮಳೆ ಆಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT