ಗುರುವಾರ , ಆಗಸ್ಟ್ 6, 2020
25 °C

ಹೊಸಪೇಟೆಯಲ್ಲಿ ಮುಂದುವರಿದ ಮಳೆ: ತುಂಗಭದ್ರಾ ಒಳಹರಿವು ಭಾರಿ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಕಾರಣ ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಸತತ ಹೆಚ್ಚಾಗುತ್ತಲೇ ಇದೆ.

ಗುರುವಾರ 16,211 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಬುಧವಾರ 7,321 ಕ್ಯುಸೆಕ್‌, ಮಂಗಳವಾರ 2,532 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. ಒಟ್ಟು 1,633 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,593.91 ಅಡಿ ನೀರಿನ ಸಂಗ್ರಹವಿದೆ. 

‘ಶಿವಮೊಗ್ಗದ ತುಂಗಾ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ಕ್ರಸ್ಟ್‌ಗೇಟ್‌ಗಳನ್ನು ತೆರೆದು ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಒಳಹರಿವು ಮತ್ತಷ್ಟು ಹೆಚ್ಚಾಗಿ ಅಪಾರ ನೀರು ಜಲಾಶಯಕ್ಕೆ ಹರಿದು ಬರುವ ಸಾಧ್ಯತೆ ಇದೆ’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಮುಂದುವರಿದ ಮಳೆ: ಹೊಸಪೇಟೆ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಮುಂದುವರಿದಿದೆ. ಬುಧವಾರ ತಡರಾತ್ರಿ ವರ್ಷಧಾರೆಯಾಗಿತ್ತು. ಕೆಲಹೊತ್ತು ಬಿಡುವು ಕೊಟ್ಟ ಮಳೆ ಗುರುವಾಗ ಬೆಳಗಿನ ಜಾವ ಸುರಿದಿದೆ. ದಿನವಿಡೀ ದಟ್ಟ ಕಾರ್ಮೋಡ ಕವಿದಿತ್ತು. ಬಿಟ್ಟು ಬಿಟ್ಟು ಮಳೆಯಾಗುತ್ತಿರುವ ಕಾರಣ ವಾತಾವರಣ ಸಂಪೂರ್ಣ ತಂಪಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು