ಶನಿವಾರ, ಡಿಸೆಂಬರ್ 7, 2019
24 °C
ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ; ಇನ್ನೂ ಬಾರದ ಆದೇಶ

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಮೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ರಾಜ್ಯದಲ್ಲಿ ಈ ಬಾರಿ ತೊಗರಿ ದರ ಕುಸಿಯುವ ಆತಂಕ ಎದುರಾಗಿದ್ದು, ಪ್ರತಿ ಕ್ವಿಂಟಲ್‌ಗೆ ₹ 5,800 ಬೆಂಬಲ ಬೆಲೆ ಅಡಿ ಖರೀದಿ ಮಾಡಬೇಕು ಎಂದು ರಾಜ್ಯವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ಕಲಬುರ್ಗಿ, ಯಾದಗಿರಿ, ಬೀದರ್‌, ರಾಯಚೂರು, ವಿಜಯಪುರ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳು ಸೇರಿ ಈ ಬಾರಿ 11.99 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದೆ. ಒಟ್ಟು 10.79 ಲಕ್ಷ ಮೆ.ಟನ್‌ ಇಳುವರಿ ಬರುವ ನಿರೀಕ್ಷೆ ಇದೆ.

ಸದ್ಯ ತೊಗರಿ ಪ್ರತಿ ಕ್ವಿಂಟಲ್‌ಗೆ ₹ 4,015ರಿಂದ ₹ 5,427ರಂತೆ ಮಾರಾಟವಾಗುತ್ತಿದೆ. ರಾಶಿ ಆರಂಭಗೊಳ್ಳುತ್ತಿದ್ದಂತೆ ದರ ಇನ್ನಷ್ಟು ಕುಸಿಯುವ ಸಾಧ್ಯತೆ ಇದ್ದು, ಡಿಸೆಂಬರ್‌ನಿಂದ ಏಪ್ರಿಲ್‌ವರೆಗೆ ಖರೀದಿ ಕೇಂದ್ರಗಳಲ್ಲಿ ಖರೀದಿ ಮಾಡಲು ಅನುಮತಿ ನೀಡಬೇಕು ಎಂದು ರಾಜ್ಯ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್‌. ನಾಗಾಂಬಿಕಾ ದೇವಿ ಪ್ರಸ್ತಾವದಲ್ಲಿ ಕೋರಿದ್ದಾರೆ.

‘ರಾಜ್ಯದಲ್ಲೇ ಅತಿ ಹೆಚ್ಚು ತೊಗರಿ ಬೆಳೆಯುವ ಕಲಬುರ್ಗಿ ಜಿಲ್ಲೆಯಲ್ಲೇ 56 ಲಕ್ಷ ಕ್ವಿಂಟಲ್‌ ಇಳುವರಿ ಅಂದಾಜಿಸಲಾಗಿದೆ. ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಕ್ವಿಂಟಲ್‌ ಕಾಳು ಸಂಗ್ರಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖರೀದಿ ಕೇಂದ್ರಗಳನ್ನೂ ಗುರುತಿಸಲಾಗಿದೆ. ಕೇಂದ್ರ ಸರ್ಕಾರದಿಂದ ಆದೇಶ ಬಂದ ತಕ್ಷಣ ಖರೀದಿ ಆರಂಭವಾಗಲಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೀಂದ್ರನಾಥ ಸೂಗೂರ ಪ್ರತಿಕ್ರಿಯಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು