ಹುಬ್ಬಳ್ಳಿ ಆಯೋಧ್ಯಾ ನಗರ: ಇಬ್ಬರು ಮಕ್ಕಳನ್ನು ಕೊಂದ ತಾಯಿ!

ಹುಬ್ಬಳ್ಳಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ಹೆತ್ತ ಮಕ್ಕಳನ್ನೇ ತಾಯಿಯೊಬ್ಬರು ವೇಲ್ ನಿಂದ ಬಿಗಿದು ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಆಯೋಧ್ಯಾ ನಗರದಲ್ಲಿ ನಡೆದಿದೆ.
ಪ್ರೇಮಾ ಪರುಶುರಾಮ ಹುಲಕೋಟಿ ಎಂಬ ಮಹಿಳೆ ಈ ಕೃತ್ಯ ಎಸಗಿದ ತಾಯಿ.
ರೋಹಿತ್ (6) ರೋಹಿಣಿ (4) ಮೃತ ದುರ್ದೈವಿಗಳು. ಪತಿ ಪರಶುರಾಮ ಕೆಲಸಕ್ಕೆ ಹೊದ ಸಮಯದಲ್ಲಿ ಕೃತ್ಯ ಎಸಗಿದ್ದಾರೆ.
ತಾನೇ ಮಕ್ಕಳನ್ನು ಕತ್ತು ಹಿಸುಕಿ ಕೊಂದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದಂತೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ತಾಯಿಯನ್ನು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.