ಗುರುವಾರ , ಜನವರಿ 23, 2020
19 °C

ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ: ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ‘ಸಚಿವ ಸ್ಥಾನಕ್ಕೆ ನಾನೂ ಪ್ರಬಲ ಆಕಾಂಕ್ಷಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೇರೆ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಅವಕಾಶ ಸಿಕ್ಕಿಲ್ಲ. ನಾನು ಮೂರು ಬಾರಿ ಶಾಸಕನಾಗಿದ್ದೇನೆ’ ಎಂದು ಹೇಳಿದರು.

ಉಪಮುಖ್ಯಮಂತ್ರಿ ಸ್ಥಾನ ಅವಶ್ಯಕತೆ ಇಲ್ಲ. ಏನಿದ್ದರೂ ಮುಖ್ಯಮಂತ್ರಿ ಒಬ್ಬರೇ ಸಾಕು. ಬಿಜೆಪಿ ಯಾವುದೇ ಜಾತಿಗೆ ಸೀಮಿತವಾದ ಪಕ್ಷ ಅಲ್ಲ. ರಾಜ್ಯದಲ್ಲಿ ಮೂರುವರೆ ವರ್ಷ ಬಿಜೆಪಿ ಅಧಿಕಾರದಲ್ಲಿರುತ್ತದೆ.

‘ಸಾವರ್ಕರ್‌ಗೆ ಹೋಲಿಕೆ ಮಾಡಿಕೊಳ್ಳುವ ರಾಹುಲ್ ಗಾಂಧಿ ರಾಜಕೀಯದಲ್ಲಿ ಬಚ್ಚಾ ಇದ್ದ ಹಾಗೆ, ಕಾಂಗ್ರೆಸ್‌ನಲ್ಲಿ ನಾಯಕತ್ವ ಸತ್ತು ಹೋಗಿದೆ’ ಎಂದು ಆರೋಪಿಸಿದರು.

‘ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಆರು ಜನ ಶಾಸಕರು ಇದ್ದು, ಯಾರಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಿ ಎಂದು ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್‌.ವಿ. ‌ರಾಮಚಂದ್ರ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಮಹಾನಗರ ಪಾಲಿಕೆ ಸದಸ್ಯರಿಗೆ ಏರ್ಪಡಿಸಿದ್ದ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲು ಅವರಲ್ಲಿ ಮನವಿ ಮಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು