ಎಂಆರ್‌ಪಿಎಲ್‌ಗಾಗಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ

7

ಎಂಆರ್‌ಪಿಎಲ್‌ಗಾಗಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ

Published:
Updated:

ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ವಿಸ್ತರಣೆಗಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ರೈತರು ಸೋಮವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳೂರಿನ ಹೊರವಲಯದ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮಗಳಲ್ಲಿ 1,011 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ವಿರೋಧಿಸಿ, ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ ಮತ್ತು ಕೃಷಿ ಭೂಮಿ ಸಂರಕ್ಷಣಾ ವೇದಿಕೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಜಮೀನು ದರ ನಿಗದಿ ಸಭೆಗೆ ನುಗ್ಗಲು ಮುಂದಾದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, 'ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶದಂತೆ ಮುಂದುವರಿಯಲಾಗುವುದು. ನ್ಯಾಯಾಲಯದ ಸೂಚನೆಯಂತೆ ಸಭೆ ನಡೆಸಲಾಗುತ್ತಿದೆ' ಎಂದರು.

ವಿವಾದ ಇತ್ಯರ್ಥಪಡಿಸಲು ಶೀಘ್ರವಾಗಿ ಎಂಆರ್‌ಪಿಎಲ್, ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರ ಜೊತೆ‌ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !