ಶನಿವಾರ, ಜುಲೈ 24, 2021
27 °C
14ರಿಂದ ಭಕ್ತರಿಗೆ ಅವಕಾಶ

ಕಟೀಲು: ದೇವರ ದರ್ಶನಕ್ಕೆ ಇ–ಟಿಕೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಲ್ಕಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇದೇ 14ರಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಇ–ಟಿಕೆಟ್‌ ವ್ಯವಸ್ಥೆ ಮಾಡಲಾಗಿದೆ.

ದೇವಸ್ಥಾನದ ವೆಬ್‌ಸೈಟ್‌ನಲ್ಲಿ ಉಚಿತ ಇ–ಟಿಕೆಟ್ ಪಡೆದುಕೊಂಡು, ದರ್ಶನ ಕಾಯ್ದಿರಿಸಿಕೊಳ್ಳಬೇಕು. ಪ್ರತಿ 15 ನಿಮಿಷಕ್ಕೆ ಅರವತ್ತು ಮಂದಿಯಂತೆ ಬೆಳಿಗ್ಗೆ 7.30ರಿಂದ ಸಂಜೆ 7.30ರ ತನಕ ಅವಕಾಶ ನೀಡಲಾಗುವುದು.

ಸ್ಥಳೀಯ ಭಕ್ತರಿಗೆ ಬೆಳಿಗ್ಗೆ 6ರಿಂದ 7.30ರವರೆಗೆ ಟಿಕೆಟ್‌ ರಹಿತವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ ಎಂದು ದೇಗುಲದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ ಮತ್ತು ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ಅಂತರ ಕಾಪಾಡಲು ಆವರಣದಲ್ಲಿ ಚೌಕಗಳನ್ನು ಹಾಕಲಾಗಿದೆ.

ಜೂ.8ರಿಂದ ದೇಗುಲಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಸರ್ಕಾರ ಅವಕಾಶ ಕಲ್ಪಿಸಿದ್ದರೂ, ಕಟೀಲಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮುಂದೂಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು