ಬಹುಕೋಟಿ ಹಗರಣ: ಜನಪ್ರತಿನಿಧಿಗಳಿಗೆ ಕ್ಲೀನ್‌ ಚಿಟ್‌

ಬುಧವಾರ, ಜೂನ್ 26, 2019
23 °C
ನ್ಯಾಯಾಲಯಕ್ಕೆ 1.43 ಲಕ್ಷ ಪುಟಗಳ ದೋಷಾರೋಪ ಪಟ್ಟಿ

ಬಹುಕೋಟಿ ಹಗರಣ: ಜನಪ್ರತಿನಿಧಿಗಳಿಗೆ ಕ್ಲೀನ್‌ ಚಿಟ್‌

Published:
Updated:

ಕೊಪ್ಪಳ: ಸಣ್ಣ ನೀರಾವರಿ ಇಲಾಖೆಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಹಗರಣ ಕುರಿತು ಎರಡು ವರ್ಷ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು, ಮಂಗಳವಾರ 1.43 ಲಕ್ಷ  ಪುಟಗಳ ದೋಷಾರೋಪಪಟ್ಟಿಯನ್ನು ನಗರದ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದರು.

2016 ಮೇ 11ರಂದು ಸಣ್ಣ ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳ ತುಂಡು ಗುತ್ತಿಗೆ ನೀಡಿದ ಪ್ರಕರಣಗಳಲ್ಲಿ ಸುಮಾರು ₹40 ಕೋಟಿ ಹಗರಣ ನಡೆದಿತ್ತು.

42 ಗುತ್ತಿಗೆದಾರರು, 26 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದ ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

‘ಸಣ್ಣ ನೀರಾವರಿ ಇಲಾಖೆಯ ಅಂದಿನ ಕೊಪ್ಪಳದ ಕಾರ್ಯನಿರ್ವಾಹಕ ಎಂಜಿನಿಯರ್‌ ಆರ್.ಜಿ.ಪ್ರೇಮಾನಂದ್ ಮೊದಲ ಆರೋಪಿಯಾಗಿದ್ದಾರೆ. ಒಟ್ಟು 18 ಸರ್ಕಾರಿ ಅಧಿಕಾರಿಗಳು, 42 ಜನ ಗುತ್ತಿಗೆದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದೇವೆ. ಇದರಲ್ಲಿ ರಾಜಕಾರಣಿಗಳು ಭಾಗಿಯಾದ ಬಗ್ಗೆ ಯಾವುದೇ ದಾಖಲೆ ಇಲ್ಲ’ ಎಂದು ಸಿಐಡಿ ಡಿವೈಎಸ್ಪಿ ಕೆ.ಪುರುಷೋತ್ತಮ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

‘ನಾನು ಮತ್ತು ಗೋವಿಂದ ಕಾರಜೋಳ ಅವರು ಸಣ್ಣ ನೀರಾವರಿ ಖಾತೆ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿತ್ತು. ನಾನೇ 
ತನಿಖೆಗೆ ಆದೇಶಿಸಿದ್ದೆ’ ಎಂದು  ಮಾಜಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದರು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !