ಮಂಗಳವಾರ, ಜೂನ್ 2, 2020
27 °C

58 ಪುರಸಭೆಗಳ ಮೀಸಲಾತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 58 ಪುರಸಭೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ಪಟ್ಟಿ ಪ್ರಕಟಿಸಲಾಗಿದೆ.

ಬಹುತೇಕ ಪುರಸಭೆಗಳಿಗೆ ಚುನಾವಣೆ ನಡೆದು, ವರ್ಷ ತುಂಬುತ್ತಾ ಬಂದರೂ ಮೀಸಲಾತಿ ಪ್ರಕಟ ಆಗದ ಕಾರಣ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಆಯ್ಕೆ ಆಗಿರಲಿಲ್ಲ. ರಾಜ್ಯ ಸರ್ಕಾರ ವಿವಿಧ ವರ್ಗಗಳ ಮೀಸಲಾತಿಯನ್ನು ಪ್ರಕಟಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಮೀಸಲಾತಿ ತಡವಾಗಿ ಪ್ರಕಟಿಸಿದ್ದರಿಂದ ಅವಧಿ ಮುಕ್ತಾಯವೂ ಒಂದು ವರ್ಷದಷ್ಟು ಮುಂದಕ್ಕೆ ಹೋಗಲಿದೆ. ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಲಿದೆ.

‘ನ್ಯಾಯಾಲಯದ ತಡೆಯಾಜ್ಞೆ ಇರುವುದರಿಂದ ರಾಜ್ಯದ ಒಟ್ಟು 268 ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ’ ಎಂದು ಪೌರಾಡಳಿತ ಸಚಿವ ನಾರಾಯಣ ಗೌಡ ವಿಧಾನಪರಿಷತ್ತಿನಲ್ಲಿ ಹೇಳಿಕೆ ನೀಡಿರುವ ಬೆನ್ನಲ್ಲೇ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಯಾಲಯದಲ್ಲಿ ಇತ್ಯರ್ಥವಾಗದೇ ಅಧಿಸೂಚನೆ ಹೊರಡಿಸಿರುವುದು ಎಷ್ಟು ಸರಿ ಎಂಬ ಚರ್ಚೆಯೂ ಆರಂಭವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು