ಶುಕ್ರವಾರ, ಫೆಬ್ರವರಿ 26, 2021
28 °C

ಬಿಜೆಪಿ ಸೇರುತ್ತೇವೆ: ಕಾಂಗ್ರೆಸ್‌ ಶಾಸಕ ಮುನಿರತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವ ಪಕ್ಷಕ್ಕೆ ಬೆಂಬಲ ನೀಡಲಾಗುವುದು. ಬಿಜೆಪಿ ಜತೆಗೆ ಕೈಜೋಡಿಸಲೂ ಸಿದ್ಧ’ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ ಹೇಳಿದ್ದಾರೆ.

ರಾಜೀನಾಮೆ ನೀಡಿದ ಇತರ ಕೆಲ ಶಾಸಕರು ಮುಂಬೈ ಹೋಟೆಲ್‌ನಲ್ಲಿ ತಂಗಿದ್ದರೆ, ಮುನಿರತ್ನ ಬೆಂಗಳೂರಿನಲ್ಲೇ ಇದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ವಿಚಾರ ತಿಳಿಸಿದರು.

‘ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಕ್ಷೇತ್ರದ ಸಮಸ್ಯೆ ಕುರಿತು ಚರ್ಚಿಸಲು ಸಚಿವ ಎಚ್.ಡಿ.ರೇವಣ್ಣ ನಿರ್ಲಕ್ಷ್ಯ ತೋರಿದರು. ನಮ್ಮ ರಾಜೀನಾಮೆ ತೀರ್ಮಾನ ಅಚಲ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.

ಮುನಿರತ್ನ ಹೇಳಿಕೆಯ ನಡುವೆಯೇ ಮಸ್ಕಿ ಶಾಸಕ ಪ್ರತಾಪ್‌ಗೌಡ ಪಾಟೀಲ್ ಸಹ ಇದೇ ಧಾಟಿಯಲ್ಲಿ ಮಾತನಾಡಿದ್ದಾರೆ. ‘ಮೈತ್ರಿ ಸರ್ಕಾರದಲ್ಲಿ ನಮ್ಮನ್ನು ಕಡೆಗಣಿಸಿದ್ದು, ನಾವು ಬಿಜೆಪಿ ಸೇರಲು ನಿರ್ಧರಿಸಿದ್ದೇವೆ’ ಎಂದು ಹೇಳಿದ್ದಾರೆ.

ಜೆಡಿಎಸ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿರುವ ಎಚ್.ವಿಶ್ವನಾಥ್, ‘ನನಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಎಚ್.ಡಿ.ದೇವೇಗೌಡ ಅವರಲ್ಲ. ಹುಣಸೂರು ಕ್ಷೇತ್ರದ ಜನ. ಹೆಸರಿಗೆ ಮಾತ್ರ ಜೆಡಿಎಸ್ ಅಧ್ಯಕ್ಷನಾಗಿದ್ದೆ. ಎಚ್.ಡಿ.ಕುಮಾರಸ್ವಾಮಿ ನನ್ನ ಮಾತಿಗೆ ಯಾವುದೇ ಮನ್ನಣೆ ಕೊಡಲಿಲ್ಲ. ಕನಿಷ್ಠ ನನ್ನ ಅಳಿಯನ ವರ್ಗಾವಣೆ ಮಾಡಿಸಲು ಆಗಲಿಲ್ಲ' ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು